Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಕ್ಷಗಾನ ಕ್ಷೇತ್ರದಲ್ಲಿ ಶ್ರದ್ಧೆಯ...

ಯಕ್ಷಗಾನ ಕ್ಷೇತ್ರದಲ್ಲಿ ಶ್ರದ್ಧೆಯ ಸಂಶೋಧನೆ ಅಗತ್ಯ: ಪ್ರೊ.ವಿವೇಕ ರೈ

ಪ್ರಭಾಕರ ಜೋಶಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ7 March 2020 10:07 PM IST
share
ಯಕ್ಷಗಾನ ಕ್ಷೇತ್ರದಲ್ಲಿ ಶ್ರದ್ಧೆಯ ಸಂಶೋಧನೆ ಅಗತ್ಯ: ಪ್ರೊ.ವಿವೇಕ ರೈ

ಉಡುಪಿ, ಮಾ.7: ಯಕ್ಷಗಾನ ಸಂಶೋಧನಾ ಕ್ಷೇತ್ರದಲ್ಲಿ ವಿಶೇಷವಾದ ಶ್ರದ್ಧೆ ಮತ್ತು ಪರಿಶ್ರಮದ ಮೂಲಕ ತೊಡಗಿಸಿಕೊಳ್ಳಬೇಕಾದ ಅಗತ್ಯವಿದೆ. ಈ ನಿಟ್ಟಿ ನಲ್ಲಿ ನಾವು ಸ್ವಪ್ರಯತ್ನದಿಂದ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದ ಮುಳಿಯ ತಿಮ್ಮಪ್ಪಯ್ಯರ ಮಾದರಿಯನ್ನು ಅನುಸರಿಸಬೇಕಾಗಿದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ ಹೇಳಿದ್ದಾರೆ.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಪ್ ಹೈಯರ್ ಎಜ್ಯುಕೇಶನ್, ಎಂಜಿಎಂ ಕಾಲೇಜು ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ಡಾ.ಎಂ.ಪ್ರಭಾಕರ ಜೋಶಿ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

 ಜಾತಿ ಎಂಬುದು ಒಂದು ಕಠಾರಿಯೂ, ಒಂದು ಗುರಾಣಿಯೂ ಆಗಿರುವ ಇಂದಿನ ಸಂದರ್ಭದಲ್ಲಿ ಮುಳಿಯ ತಿಮ್ಮಪ್ಪಯ್ಯ, ತನ್ನ ಬರಹಗಳಲ್ಲಿ ತನ್ನ ಜಾತಿಯಲ್ಲಿನ ತಪ್ಪಿನ ಬಗ್ಗೆ ವಿಮರ್ಶೆ ಹಾಗೂ ಟೀಕೆ ಮಾಡುವ ಧೈರ್ಯವನ್ನು ತೋರಿಸಿದ್ದರು. ಈ ನಿಟ್ಟಿನಲ್ಲಿ ಮುಳಿಯ ತಿಮ್ಮಪ್ಪಯ್ಯನವರ ಸಾಹಿತ್ಯವನ್ನು ನಾವು ಅವಲೋಕಿಸಬೇಕಾಗಿದೆ ಎಂದರು.

ಇಂದು ವಿಶ್ವವಿದ್ಯಾನಿಲಯಗಳು ಪಿಎಚ್‌ಡಿ ಮಾಡಲು ಸಂಶೋಧನಾ ಕೇಂದ್ರವನ್ನು ನೀಡಿದರೂ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವವರಿಲ್ಲ. ಪಿಎಚ್‌ಡಿ ಪದವಿ ಪಡೆದ ತಕ್ಷಣ ಸಂಶೋಧನೆ ಕೊನೆಗೊಳ್ಳುವುದಿಲ್ಲ. ನಂತರವೂ ತನ್ನ ಅಧ್ಯಯನವನ್ನು ಮುಂದುವರೆಸುವವರೇ ನಿಜವಾದ ಸಂಶೋಧಕರಾಗು ತ್ತಾರೆ. ಯಾಕೆಂದರೆ ಸಂಶೆಧನೆಗೆ ಕೊನೆ ಎಂಬುದಿಲ್ಲ ಎಂದರು.

ಸಂಸ್ಕೃತದ ಪರವಾಗಿ ಮಾತನಾಡುವವರು ಮೊದಲು ತುಳು ಭಾಷೆಯನ್ನು ಸರಿಯಾಗಿ ತಿಳಿದುಕೊಂಡು ಸಂಸ್ಕೃತವನ್ನು ಸರಿ ಮಾಡಿಕೊಳ್ಳ ಬೇಕು. ಸಂಸ್ಕೃತ ದೇವ ಭಾಷೆ ಅಲ್ಲ. ದೇಶಿಯ ಮೂಲಕವೇ ಶಿಷ್ಟವನ್ನು ಕಟ್ಟಬೇಕೇ ಹೊರತು ಶಿಷ್ಟ ದಿಂದಲೇ ಎಲ್ಲವನ್ನು ತೀರ್ಮಾನ ಮಾಡಲು ಆಗುವುದಿಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.

 ಪ್ರಶಸ್ತಿ ಸ್ವೀಕರಿಸಿದ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಮಾತನಾಡಿ, ಯಕ್ಷಗಾನ ಬಹುವಿಧವಾಗಿ ಬೆಳೆದ ಪರಿಣಾಮ ಇಂದು ವಿಮರ್ಶ ಪಂಥಕ್ಕೂ ಯಕ್ಷಗಾನಕ್ಕೂ ಸಂಬಂಧ ಇಲ್ಲವಾಗಿದೆ. ಸೈದ್ಧಾಂತಿಕವಾಗಿ ದೃಢತೆ, ಮುನ್ನೋಟ ಉಳ್ಳ, ಯಕ್ಷಗಾನದ ಸಂರಕ್ಷಣೆ, ಸಂವರ್ಧನೆ, ಪರಿಷ್ಕರಣೆಗೆ ಬದ್ಧವಾಗಿರುವ ವಿಮರ್ಶ ಪಂಥ ಬೆಳೆಯಬೇಕು. ಅದುವೇ ನಾವು ತಿಮ್ಮಪ್ಪಯ್ಯ ಅವರಿಗೆ ನೀಡುವ ಕಾಣಿಕೆಯಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜ್ಯು ಕೇಶನ್‌ನ ಆಡಳಿತಾಧಿಕಾರಿ ಡಾ.ಎಚ್.ಶಾಂತಾರಾಮ್ ಮಾತನಾಡಿದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಪ್ರೊ.ಎಂ. ಎಲ್.ಸಾಮಗ ಅಭಿನಂದನಾ ಭಾಷಣ ವಾಡಿದರು.
ಪ್ರಶಸ್ತಿ ಸಮಿತಿಯ ಕಾರ್ಯದರ್ಶಿ ಮನೋರಮ ಎಂ.ಭಟ್, ಮುಳಿಯ ತಿಮ್ಮಪ್ಪಯ್ಯರ ಮಕ್ಕಳಾದ ಗೋಪಾಲಕೃಷ್ಣ ಭಟ್, ಮುಳಿಯ ರಾಘವಯ್ಯ ಉಪಸ್ಥಿತರಿದ್ದರು. ಕೇಂದ್ರದ ಸಂಯೋಜನಾಧಿಕಾರಿ ಪ್ರೊ.ವರದೇಶ ಹಿರೇಗಂಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸುಶ್ಮಿತಾ ಎ. ವಂದಿಸಿದರು, ಡಾ.ನರಸಿಂಹ ಮೂರ್ತಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X