ಸಿದ್ದರಾಮಯ್ಯಗೆ ಕಾಮಾಲೆ ಕಣ್ಣು ಇದೆ: ರಮೇಶ್ ಜಾರಕಿಹೊಳಿ

ಬೆಳಗಾವಿ, ಮಾ.7: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ದರಿದ್ರ ಸರಕಾರವಿದೆ ಎನ್ನುವ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕಾಮಾಲೆ ಕಣ್ಣು ಇದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಣ್ಣು ಕಾಮಾಲೆಯಾಗಿದೆ. ಮುಂದೆ ಒಳ್ಳೆಯ ದಿನಗಳು ಬಂದಾಗ ಯಾರು ದರಿದ್ರರು ಎಂಬುವುದನ್ನು ಜನ ತೀರ್ಮಾನ ಮಾಡುತ್ತಾರೆ ಎಂದರು. ರಾಜ್ಯದ ಅಭಿವೃದ್ಧಿಗೆ ಮುಖ್ಯಮಂತ್ರಿ ಉತ್ತಮ ಬಜೆಟ್ ಮಂಡನೆ ಮಾಡಿದ್ದಾರೆ ಎಂದ ಅವರು, ವಿಶೇಷವಾಗಿ ನೀರಾವರಿ, ಸಮಾಜ ಕಲ್ಯಾಣ ಇಲಾಖೆಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ, ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ನೀಡಲಾಗಿದೆ ಎಂದು ತಿಳಿಸಿದರು.
Next Story





