ಬ್ರಹ್ಮಾವರ: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

ಬ್ರಹ್ಮಾವರ, ಮಾ.7: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿಯೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯ ಎದುರು ಶನಿವಾರ ಸಂಭವಿಸಿದೆ.
ಮೃತರನ್ನು ಹೊನ್ನಾಳದ ಕುಶಲ್ ಶೆಟ್ಟಿ(67) ಎಂದು ಗುರುತಿಸಲಾಗಿದೆ.
ಹೊನ್ನಾಳದಲ್ಲಿ ರೇಶನ್ ಅಂಗಡಿ ಹೊಂದಿರುವ ಕುಶಲ್ ಶೆಟ್ಟಿ ಮನೆಗೆ ಸಾಮಗ್ರಿಗಳನ್ನು ಖರೀದಿಸಲೆಂದು ಬ್ರಹಾವರಕ್ಕೆ ಬಂದು ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅವರ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಕುಂದಾಪುರ ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಕುಶಲ್ ಶೆಟ್ಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





