ಫ್ರೆಟರ್ನಿಟಿ ಮೂವ್ ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ತಫ್ಲೀಲ್ ಆಯ್ಕೆ

ಬೆಂಗಳೂರು: ವಿದ್ಯಾರ್ಥಿ ಯುವ ಸಂಘಟನೆಯಾಗಿರುವ ಫ್ರೆಟರ್ನಿಟಿ ಮೂವ್ ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಂಗಳೂರಿನ ತಫ್ಲೀಲ್ ಯು. ಸಂಘಟನೆಯ ಆಂತರಿಕ ಚುನಾವಣೆಯಲ್ಲಿ ನೇಮಕಗೊಂಡರು.
ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಯಾದರು.
ದಕ್ಷಿಣ ಕನ್ನಡ ಜಿಲ್ಲೆಯವರಾದ ತಪ್ಲೀಲ್ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಗಳಿಸಿರುತ್ತಾರೆ. ಪ್ರಸ್ತುತ ಮಲ್ಟಿ ಮೀಡಿಯಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Next Story





