ಪತ್ರಕರ್ತರ ರಾಜ್ಯ ಸಮ್ಮೇಳನ-ಸಾಂಸ್ಕೃತಿಕ ಸಂಭ್ರಮ

ಮಂಗಳೂರು: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುತ್ತಿರುವ ಪತ್ರಕರ್ತರ ರಾಜ್ಯ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು.
ತಬಲಾ ದಲ್ಲಿ ಮೂಡಬಿದ್ರಿಯ ವಿಗ್ನೇಶ್ ಪ್ರಭು ಹಾಗೂ ಹಾರ್ಮೋನಿಯಂ ನಲ್ಲಿ ಹೇಮಂತ್ ಭಾಗವತ್ ಸಹಕರಿಸಿದರು.








