Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರ್ವರಿಗೂ ಸೂರು ನೀಡುವ ಯೋಜನೆಯಡಿ 1 ಲಕ್ಷ...

ಸರ್ವರಿಗೂ ಸೂರು ನೀಡುವ ಯೋಜನೆಯಡಿ 1 ಲಕ್ಷ ಬಹುಮಹಡಿ ವಸತಿ ಗೃಹಗಳು: ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ8 March 2020 6:47 PM IST
share
ಸರ್ವರಿಗೂ ಸೂರು ನೀಡುವ ಯೋಜನೆಯಡಿ 1 ಲಕ್ಷ ಬಹುಮಹಡಿ ವಸತಿ ಗೃಹಗಳು: ಯಡಿಯೂರಪ್ಪ

ಬೆಂಗಳೂರು, ಮಾ. 8: ಪಿಎಂ ಮಹತ್ವಾಕಾಂಕ್ಷಿ ಯೋಜನೆ ಸರ್ವರಿಗೂ ಸೂರು ನೀಡುವ ಯೋಜನೆಯಡಿ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಡಿ 1 ಲಕ್ಷ ಬಹುಮಹಡಿ ವಸತಿ ಗೃಹಗಳನ್ನು ಬೆಂಗಳೂರಿನಲ್ಲಿ ಕಟ್ಟಲು ಉದ್ದೇಶಿಸಲಾಗಿದ್ದು, 932 ಬಹುಮಹಡಿ ವಸತಿ ಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿರುವುದು ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ರವಿವಾರ ನಗರದ ಹೊರವಲಯದ ದಾಸರಹಳ್ಳಿ ಕ್ಷೇತ್ರ ವ್ಯಾಪ್ತಿಯ ಗಾಣಿಗರಹಳ್ಳಿ ಸರ್ವೆ ನಂ.74ರಲ್ಲಿ ಶಂಕುಸ್ಥಾಪನೆ ನೆರವೇರಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಡಜನರು ನೆಮ್ಮದಿ ಹಾಗೂ ಸ್ವಾಭಿಮಾನದಿಂದ ಬದುಕು ಸಾಗಿಸುವ ಉದ್ದೇಶದಿಂದ ಈ ಬೃಹತ್ ವಸತಿ ಯೋಜನೆ ಜಾರಿಗೊಳಿಸಲಾಗಿದ್ದು, ಶೀಘ್ರದಲ್ಲಿ ಬೆಂಗಳೂರಿನ ಇತರೆ ಪ್ರದೇಶಗಳಲ್ಲಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಒತ್ತುವರಿಯಾಗಿರುವ ಸರಕಾರಿ ಜಾಗಗಳನ್ನು ಬಿಡಿಸಿಕೊಂಡು ಬಡವರಿಗೆ ವಸತಿ ಗೃಹಗಳು ಸೇರಿ ಸಾರ್ವಜನಿಕ ಉಪಯೋಗಿ ಯೋಜನೆಗಳನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಮುಖ್ಯ ಪ್ರದೇಶಗಳ ಒತ್ತುವರಿ ಜಾಗಗಳನ್ನು ಬಿಡಿಸಿಕೊಂಡು ಹರಾಜು ಮೂಲಕ ಮಾರಾಟ ಮಾಡಿ, ಅದರಿಂದ ಬರುವ ಹಣವನ್ನು ಸಾರ್ವಜನಿಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲಾಗುವುದು ಎಂದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ, ಈ ಬಹುಮಹಡಿ ವಸತಿ ಗೃಹಗಳ ಯೋಜನೆಯಡಿ ಕೇಂದ್ರ ಪ್ರತಿಮನೆಗೆ 1.50 ಲಕ್ಷ ರೂ. ಸಹಾಯಧನವಾಗಿ ನೀಡಿದೆ. ವಸತಿ ಸಚಿವ ವಿ.ಸೋಮಣ್ಣ ಉತ್ತಮವಾದ ಹೆಸರನ್ನು ಹೊಂದಿದ್ದು, ಮುಂದಿನ ವರ್ಷದೊಳಗೆ ಇಂದು ಶಂಕುಸ್ಥಾಪನೆ ನೆರವೇರಿದ ಈ 932 ಬಹುಮಹಡಿ ವಸತಿ ಗೃಹಗಳನ್ನು ಗುಣಮಟ್ಟದಲ್ಲಿ ನಿರ್ಮಿಸಿ ಬಡವರಿಗೆ ಹಂಚಿ, ಒಂದೇದಿನ ಎಲ್ಲ ಮನೆಗಳ ಗೃಹಪ್ರವೇಶದ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಆಗಲಿ ಎಂದು ಆಶಯ ವ್ಯಕ್ತಪಡಿಸಿದರು.

ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ, ಮುಂದಿನ ವರ್ಷದೊಳಗೆ 5 ಸಾವಿರಕ್ಕಿಂತ ಹೆಚ್ಚಿನ ಬಹುಮಹಡಿ ವಸತಿ ಗೃಹಗಳನ್ನು ನಿರ್ಮಿಸುವ ಗುರಿ ಹಾಕಿಕೊಳ್ಳಲಾಗಿದ್ದು, ಮಾತಿಗಿಂತ ಕೆಲಸ ಮಾಡಿ ತೋರಿಸುತ್ತೇವೆ. ಈ ವಸತಿ ಗೃಹಗಳು ಬಡವರಿಗೆ ತಲುಪಿಸುವ ಜವಾಬ್ದಾರಿ ಇಲ್ಲಿನ ಸ್ಥಳೀಯ ಪ್ರತಿನಿಧಿಗಳಿಗಿದ್ದು, ಅವರು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮತ್ತು ಕಾಮಗಾರಿ ಗುಣಮಟ್ಟ ಪರಿಶೀಲಿಸುವ ಕಾರ್ಯದಲ್ಲಿ ಭಾಗವಹಿಸಬೇಕು ಎಂದರು.

ಆನೇಕಲ್ ನಲ್ಲಿ 5 ಸಾವಿರ, ಯಶವಂತಪುರ ವ್ಯಾಪ್ತಿಯಲ್ಲಿ 8 ಸಾವಿರ ಬಹುಮಹಡಿ ವಸತಿ ಗೃಹಗಳನ್ನು ನಿರ್ಮಿಸಲು ಈಗಾಗಲೇ ಈ ಯೋಜನೆ ಸಿದ್ಧವಾಗಿದ್ದು, ಪ್ರತಿಯೊಂದು ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷಬೇಧ ಮರೆತು ಬಡವರಿಗಾಗಿ ಬಹುಮಹಡಿ ವಸತಿ ಗೃಹಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ಐದು ಎಕರೆ ವಿಸ್ತೀರ್ಣದಲ್ಲಿ 932 ಬಹುಮಹಡಿ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದ್ದು, ಈ ದಾಸರಹಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರದ ಇನ್ನೂ ಬಹಳ ಜಮೀನು ಇದ್ದು, ಹೆಚ್ಚಿನ ಬಹುಮಹಡಿ ವಸತಿ ಗೃಹಗಳನ್ನು ಕಟ್ಟಲು ಅವಕಾಶವಿದೆ. 932 ಬಹುಮಹಡಿ ವಸತಿ ಗೃಹಗಳಿಗಾಗಿ ಒಟ್ಟು 3,500 ಅರ್ಜಿಗಳು ಈಗಾಗಲೇ ಬಂದಿರುವುದು ಮನೆಗಳ ಬೇಡಿಕೆಯನ್ನು ತೋರಿಸುತ್ತದೆ ಎಂದರು. ಸರಕಾರಿ ಜಮೀನುಗಳ ಒತ್ತುವರಿ ಅಧ್ಯಯನಕ್ಕಾಗಿ ಈಗಾಗಲೇ ಬೋಪಯ್ಯ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದ್ದು, ಸಮಿತಿ ನೀಡುವ ವರದಿಯ ಆಧಾರದ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಒತ್ತುವರಿ ಭೂಮಿಯನ್ನು ತೆರವುಗೊಳಿಸಿ, ಬಡವರಿಗೆ ಮನೆ, ಆಸ್ಪತ್ರೆ, ಶಾಲೆ ಮತ್ತು ಸ್ಮಶಾನ ಸೇರಿ ಜನೋಪಯೋಗಿ ಕಾರ್ಯಗಳಿಗೆ ಬಳಸಿಕೊಳ್ಳಲಾಗುವುದು ಎಂದರು.

ಕಂದಾಯ ಇಲಾಖೆಯಿಂದ ವಸತಿ ಇಲಾಖೆಗೆ ಈಗಾಗಲೇ ರಾಜ್ಯಾದ್ಯಂತ 2,500 ಎಕರೆ ಭೂಮಿಯನ್ನು ಹಸ್ತಾಂತರಿಸಲಾಗಿದ್ದು, ಒತ್ತುವರಿ ಭೂಮಿ ತೆರವುಗೊಳಿಸಿದ ನಂತರ ಮುಂದಿನ ಮೂರು ವರ್ಷಗಳಲ್ಲಿ 10 ಸಾವಿರ ಎಕರೆ ಭೂಮಿಯನ್ನು ವಿವಿಧ ಉದ್ದೇಶಗಳಿಗಾಗಿ ಇತರೆ ಇಲಾಖೆಗಳಿಗೆ ಹಸ್ತಾಂತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಆರ್.ಮಂಜುನಾಥ್ ಮಾತನಾಡಿ, ಪಕ್ಷಬೇಧ ಮರೆತು ಇತರೆ ಪಕ್ಷದವನಾದ ನನ್ನ ಕ್ಷೇತ್ರವನ್ನು ಈ ಯೋಜನೆಯಡಿ ಆಯ್ಕೆ ಮಾಡಿಕೊಂಡು 932 ಬಹುಮಹಡಿ ವಸತಿ ಗೃಹಗಳನ್ನು ನಿರ್ಮಿಸುತ್ತಿರುವುದು ಸಿಎಂ ಅಭಿವೃದ್ಧಿ ಕನಸನ್ನು ತೋರಿಸುತ್ತಿದೆ ಎಂದು ಶ್ಲಾಘಿಸಿದರು. ಈ ಕ್ಷೇತ್ರ ಅತ್ಯಂತ ಹೆಚ್ಚು ವಲಸಿಗರನ್ನು ಮತ್ತು ಕಾರ್ಮಿಕರನ್ನು ಹೊಂದಿರುವ ಪ್ರದೇಶವಾಗಿದ್ದು, ಇಲ್ಲಿ ಬಹುಮಹಡಿ ವಸತಿಗೃಹಗಳ ಅವಶ್ಯಕತೆ ಇರುವುದನ್ನು ಮನಗಂಡು ಸರಕಾರ 1 ಲಕ್ಷ ಬಹುಮಹಡಿ ವಸತಿ ಗೃಹಗಳ ಈ ಯೋಜನೆಗೆ ತಮ್ಮ ಕ್ಷೇತ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದು ಸಂತಸ ತಂದಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X