ಮರಾಠ ಸಮಾಜದಿಂದ ಯಡಿಯೂರಪ್ಪ ಪ್ರತಿಕೃತಿ ದಹಿಸಿ ಧರಣಿ

ವಿಜಯಪುರ, ಮಾ.8: ಮರಾಠಾ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮರಾಠಾ ಸಮಾಜದವರು ಸಿಎಂ ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ವಿಜಯಪುರ ನಗರದ ಶಿವಾಜಿ ಸರ್ಕಲ್ ನಲ್ಲಿ ಸಿಎಂ ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿ, ಯಡಿಯೂರಪ್ಪ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
'ಮರಾಠ ಸಮಾಜವನ್ನು 3ಬಿ ಯಿಂದ 2ಎ ವರ್ಗಕ್ಕೆ ಸೇರಿಸಬೇಕು. ವಿಜಯಪುರ ನಗರದಲ್ಲಿ ಛತ್ರಪತಿ ಶಿವಾಜಿ ಸ್ಮಾರಕ ನಿರ್ಮಿಸುವುದರ ಜೊತೆಗೆ ಮಾರಾಠ ಸಮಾಜಕ್ಕೆ ಸರಕಾರ ಹೆಚ್ಚಿನ ಒತ್ತು ನೀಡುಬೇಕು ಎಂದು ಪ್ರತಿಭಟನಾಕಾರು ಆಗ್ರಹಿಸಿದರು.
Next Story





