Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೋಮವಾರ ವರ್ಷದ ಎರಡನೇ ಸೂಪರ್‌ಮೂನ್

ಸೋಮವಾರ ವರ್ಷದ ಎರಡನೇ ಸೂಪರ್‌ಮೂನ್

ವಾರ್ತಾಭಾರತಿವಾರ್ತಾಭಾರತಿ8 March 2020 10:22 PM IST
share
ಸೋಮವಾರ ವರ್ಷದ ಎರಡನೇ ಸೂಪರ್‌ಮೂನ್

ಹೊಸದಿಲ್ಲಿ,ಮಾ.8: ವರ್ಷದ ಮೊದಲ ಸೂಪರ್‌ಮೂನ್ ಫೆ.9ರಂದು ಬಾನನ್ನು ಬೆಳಗಿದ ನಂತರ ಎರಡನೇ ಸೂಪರ್‌ಮೂನ್ ಸೋಮವಾರ ತನ್ನ ಸಂಪೂರ್ಣ ವೈಭವದೊಂದಿಗೆ ಕಾಣಿಸಿಕೊಳ್ಳಲು ಸಜ್ಜಾಗಿದೆ. ಅಂದು ಭೂಮಿಯ ಅತ್ಯಂತ ಸಮೀಪ ದಲ್ಲಿರುವ ಚಂದ್ರ ಎಂದಿಗಿಂತ ದೊಡ್ಡ ಗಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾನೆ,ಇದೇ ಕಾರಣ ದಿಂದ ಸೂಪರ್ ಮೂನ್ ಎಂದು ಕರೆಯಲಾಗುತ್ತದೆ. ಈ ಎರಡನೇ ಸೂಪರ್‌ಮೂನ್ ಅನ್ನು ‘ವರ್ಮ್ ಮೂನ್’ ಎಂದು ಹೆಸರಿಸಲಾಗಿದೆ.

ಈ ತಿಂಗಳ ಸೂಪರ್‌ಮೂನ್ ರವಿವಾರ ನಸುಕಿನಿಂದ ಆರಂಭಗೊಂಡಿದ್ದು,ಬುಧವಾರ ಬೆಳಗಿನವರೆಗೆ ಸುಮಾರು ಮೂರು ದಿನಗಳ ಕಾಲ ಪೂರ್ಣಪ್ರಮಾಣದಲ್ಲಿ ಕಾಣಿಸಲಿದೆ. ಸೋಮವಾರ ಅದು ತನ್ನ ಗರಿಷ್ಠ ಪೂರ್ಣತೆಯನ್ನು ಪ್ರದರ್ಶಿಸಲಿದೆ.

ಪ್ರತಿಯೊಂದು ಗ್ರಹದಂತೆ ಭೂಮಿಯ ಸುತ್ತಲಿನ ಚಂದ್ರನ ಕಕ್ಷೆಯೂ ವರ್ತುಲಾಕಾರದಲ್ಲಿಲ್ಲ. ಅದು ಅಂಡಾಕಾರ ಅಥವಾ ದೀರ್ಘ ವೃತ್ತಾಕಾರವನ್ನು ಹೊಂದಿದೆ. ಅಂದರೆ ಚಂದ್ರ ಪೃಥ್ವಿಯನ್ನು ಪರಿಭ್ರಮಿಸುವಾಗ ಹತ್ತಿರಕ್ಕೆ ಬರುತ್ತಿರುತ್ತಾನೆ ಮತ್ತು ದೂರಕ್ಕೆ ಸರಿಯುತ್ತಿರುತ್ತಾನೆ. ಹುಣ್ಣಿಮೆಗೆ ಒಂದೆರಡು ದಿನಗಳು ಬಾಕಿಯಿರುವಾಗ ಚಂದ್ರ ನಮ್ಮ ಗ್ರಹಕ್ಕೆ ಅತ್ಯಂತ ಸಮೀಪಕ್ಕೆ ಬಂದಾಗ ಅದನ್ನು ಸೂಪರ್‌ಮೂನ್ ಎಂದು ಕರೆಯಲಾಗುತ್ತದೆ. ಈ ಸಂದರ್ಭದಲ್ಲಿ ಚಂದ್ರ ಎಂದಿಗಿಂತ ದೊಡ್ಡ ಗಾತ್ರದಲ್ಲಿ ಮತ್ತು ಅತ್ಯಂತ ಪ್ರಕಾಶಮಾನವಾಗಿ ಕಂಡುಬರುತ್ತಾನೆ. ಸೂಪರ್‌ಮೂನ್ ಶಬ್ದ ಮೊದಲ ಬಾರಿಗೆ 1979ರಲ್ಲಿ ಚಾಲ್ತಿಗೆ ಬಂದಿದ್ದು, ಶೀಘ್ರವೇ ಅತ್ಯಂತ ಜನಪ್ರಿಯತೆಯನ್ನು ಪಡೆದುಕೊಂಡಿತ್ತು.

ಸೂಪರ್‌ಮೂನ್ ನಾಮಕರಣ ಪ್ರಕ್ರಿಯೆಯು ಮುಖ್ಯವಾಗಿ ಅಮೆರಿಕನ್ ಮೂಲನಿವಾಸಿ ಪ್ರದೇಶಗಳು ಮತ್ತು ಋತುಮಾನಗಳೊಂದಿಗೆ ತಳುಕು ಹಾಕಿಕೊಂಡಿದೆ. ಉತ್ತರ ಅಮೆರಿಕದ ದಕ್ಷಿಣಕ್ಕೆ ನಿಕಟವಾಗಿರುವ ಬುಡಕಟ್ಟು ಜನರು ಸೋಮವಾರದ ವಿದ್ಯಮಾನಕ್ಕೆ ‘ವರ್ಮ್ ಮೂನ್’ಎಂದು ನಾಮಕರಣ ಮಾಡಿದ್ದಾರೆ. ವರ್ಷದ ಈ ಸಮಯದಲ್ಲಿ ಭೂಮಿಯ ಮಣ್ಣು ಸಡಿಲಗೊಂಡು ಎರೆಹುಳುಗಳ ಕುರುಹುಗಳು ಮೇಲ್ಮೈಯಲ್ಲಿ ಕಂಡುಬರುವುದರೊಂದಿಗೆ ವಸಂತ ಋತುವಿನ ಆಗಮನವನ್ನು ಸೂಚಿಸುತ್ತವೆ. ಇದೇ ಕಾರಣದಿಂದ ಇದಕ್ಕೆ ‘ವರ್ಮ್ ಮೂನ್’ಎಂದು ಹೆಸರಿಸಲಾಗಿದೆ.

ಮುಂದಿನ ಸೂಪರ್‌ಮೂನ್ ‘ಸೂಪರ್ ಪಿಂಕ್ ಮೂನ್’ಈ ವರ್ಷದ ಎ.8ರಂದು ಕಾಣಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X