ಕಡಂದಲೆ: ಅವಿವಾಹಿತ ಆತ್ಮಹತ್ಯೆ
ಮೂಡುಬಿದಿರೆ: ಪಾಲಡ್ಕ ಗ್ರಾಮದ ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನದ ಬಳಿಯ ನಿವಾಸಿ ಅರುಣ್ ಕುಮಾರ್(45) ಎಂಬವರು ಕೀಟನಾಶಕ ಸೇವಿಸಿ ರವಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೆಬ್ರಿಯಲ್ಲಿ ಎಲೆಕ್ಟ್ರಾನಿಕ್ಸ್ ಉದ್ಯಮವನ್ನು ನಡೆಸುತ್ತಿದ್ದ ಅರುಣ್ ಕುಮಾರ್ ಶನಿವಾರ ಕೆಲಸ ಮುಗಿಸಿ ಮನೆಗೆ ಬಂದಿದ್ದು, ರವಿವಾರ ಬೆಳಗ್ಗೆ ಕೀಟನಾಶಕ ಸೇವಿಸಿದ್ದರು ಎನ್ನಲಾಗಿದೆ. ವಿಷಯ ತಿಳಿದ ಸ್ಥಳೀಯರು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅವಿವಾಹಿತ ಅರುಣ್ ತಂದೆ ಹಾಗೂ ಸಹೋದರನೊಂದಿಗೆ ವಾಸವಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
8ಎಂಡಿಬಿ ಅರುಣ್ ಕುಮಾರ್
Next Story





