Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಪೋಡಿ ಮುಕ್ತ ಗ್ರಾಮ ಅಭಿಯಾನ’ಕ್ಕೆ ವೇಗ,...

'ಪೋಡಿ ಮುಕ್ತ ಗ್ರಾಮ ಅಭಿಯಾನ’ಕ್ಕೆ ವೇಗ, ಹಳ್ಳಿಗೆ ಅಧಿಕಾರಿಗಳ ರವಾನೆ: ಸಚಿವ ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ9 March 2020 6:33 PM IST
share
ಪೋಡಿ ಮುಕ್ತ ಗ್ರಾಮ ಅಭಿಯಾನ’ಕ್ಕೆ ವೇಗ, ಹಳ್ಳಿಗೆ ಅಧಿಕಾರಿಗಳ ರವಾನೆ: ಸಚಿವ ಆರ್.ಅಶೋಕ್

ಬೆಂಗಳೂರು, ಮಾ. 9: ರಾಜ್ಯದಲ್ಲಿ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ವೇಗ ನೀಡುವ ದೃಷ್ಟಿಯಿಂದಲೇ ತಿಂಗಳಿಗೊಮ್ಮೆ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶಿಲ್ದಾರ್ ಸೇರಿ ಹಿರಿಯ ಅಧಿಕಾರಿಗಳನ್ನು ಹಳ್ಳಿಗಳಿಗೆ ತೆರಳಲು ನಿರ್ದೇಶನ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಬೆಳ್ಳಿ ಪ್ರಕಾಶ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಜಮೀನುಗಳ ಸರ್ವೆ ಕಾರ್ಯ ಕಗ್ಗಂಟಾಗಿದ್ದು, ಮೂಲ ದಾಖಲೆ ಒದಗಿಸಬೇಕು. ಆದರೆ ಸರ್ವೇ ನಂಬರ್‌ವೊಂದರಲ್ಲಿ 100 ಎಕರೆ ಜಮೀನಿದ್ದರೆ 150 ಎಕರೆಯಷ್ಟು ಮಂಜೂರಾಗಿದ್ದು, ಇಂತಹ ಪ್ರಕರಣಗಳನ್ನು ಬೇಧಿಸಬೇಕಾಗಿದೆ. ತಹಶೀಲ್ದಾರ್ ನಿವೃತ್ತಿ ನಂತರವೂ ಸಹಿ ಮಾಡಿ ಮಂಜೂರಾತಿ ನೀಡಿರುವ ಪ್ರಕರಣಗಳಿವೆ. ಇಂತಹ ಪ್ರಕರಣಗಳಿಂದ ಸರ್ವೆ ಕಾರ್ಯ ವಿಳಂಬವಾಗುತ್ತಿದೆ. ಹೀಗಾಗಿ ಇದನ್ನು ಸರಿಪಡಿಸಲು 2015ರಿಂದ ಪೋಡಿ ಮುಕ್ತ ಗ್ರಾಮ ಅಭಿಯಾನ 174 ಕ್ಷೇತ್ರಗಳಲ್ಲಿ ಪ್ರಾರಂಭವಾಗಿದೆ ಎಂದರು.

ಕಡತ ನಿರ್ವಹಣೆ ನಿಮ್ಮ ಜವಾಬ್ದಾರಿ: ಕಡತಗಳನ್ನು ನಿರ್ವಹಣೆ ಮಾಡುವುದು ಸರಕಾರದ ಜವಾಬ್ದಾರಿ. ಮೂಲ ಕಡತಗಳು ಇಲ್ಲದಿದ್ದರೆ ಹೊಸ ದಾಖಲೆ ಮಾಡುವ ಕೆಲಸ ಅತ್ಯಂತ ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ. ಹೀಗಾಗಿ ಮಾರ್ಗಸೂಚಿ 10 ನಿಬಂಧನೆಗಳಿದ್ದು, 1ರಿಂದ 5ಕ್ಕೆ ಸೀಮಿತಗೊಳಿಸಿದರೆ ಪೋಡಿ ಪ್ರಕರಣ ಬಗೆಹರಿಸಲು ಸಾಧ್ಯ ಎಂದು ಗಮನ ಸೆಳೆದರು.

ಇದಕ್ಕೆ ಧ್ವನಿಗೂಡಿಸಿ ಮಾತನಾಡಿದ ಜೆಡಿಎಸ್‌ನ ಶಿವಲಿಂಗೇಗೌಡ, ಪೋಡಿ ಸಮಸ್ಯೆ ಹಿನ್ನೆಲೆಯಲ್ಲಿ ರೈತರು ಸಾಯುತ್ತಿದ್ದು, ಆತ್ಮಹತ್ಯೆಗೂ ಶರಣಾಗುತ್ತಿದ್ದಾರೆ. ಹೀಗಾಗಿ ಸಮಸ್ಯೆ ಪರಿಹಾರಕ್ಕೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಆಗ್ರಹಿಸಿದರು.

ಕಡೂರು ಕ್ಷೇತ್ರದಲ್ಲಿ 315 ಗ್ರಾಮಗಳಿದ್ದು, 16 ಮಂದಿ ಸರಕಾರಿ ಭೂ ಮಾಪಕರು, 11 ಮಂದಿ ಪರವಾನಗಿ ಪಡೆದ ಭೂ ಮಾಪಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 86 ಗ್ರಾಮಗಳನ್ನು ಅಳತೆಗೆ ಆಯ್ಕೆ ಮಾಡಿಕೊಂಡಿದ್ದು, 82 ಗ್ರಾಮಗಳಲ್ಲಿ ಅಳತೆ ಪೂರ್ಣಗೊಳಿಸಲಾಗಿದೆ. 72 ಗ್ರಾಮಗಳಲ್ಲಿ ದುರಸ್ತಿಯಾಗಿದ್ದು, 71 ಗ್ರಾಮಗಳಲ್ಲಿ ಇಂಡೀಕರಣ ಪೂರ್ಣಗೊಳಿಸಲಾಗಿದೆ ಎಂದು ಸಚಿವ ಅಶೋಕ್ ತಿಳಿಸಿದರು.

ಶೋಷಣೆ ತಪ್ಪಿಸಿ

‘ಪೋಡಿ ವಿಷಯದಲ್ಲಿ ರೈತರ ನಿರಂತರ ಶೋಷಣೆ ನಡೆಯುತ್ತಿದೆ. ಹಣ ನೀಡಿದರೆ ಎಲ್ಲವೂ ಸರಿಯಾಗುತ್ತದೆ. ನಿಬಂಧನೆಗಳನ್ನು ಸರಳೀಕರಣ ಮಾಡುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಿ, ಪೋಡಿ ಮುಕ್ತವನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ಸರಕಾರ ಕ್ರಮ ಕೈಗೊಳ್ಳಬೇಕು’

-ಎ.ಟಿ.ರಾಮಸ್ವಾಮಿ, ಜೆಡಿಎಸ್‌ನ ಹಿರಿಯ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X