Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನಾ ರೋಗ ತಪಾಸಣೆ: ಸಮನ್ವಯದಿಂದ...

ಕೊರೋನಾ ರೋಗ ತಪಾಸಣೆ: ಸಮನ್ವಯದಿಂದ ಕಾರ್ಯನಿರ್ವಹಿಸಲು ದ.ಕ.ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 March 2020 9:25 PM IST
share
ಕೊರೋನಾ ರೋಗ ತಪಾಸಣೆ: ಸಮನ್ವಯದಿಂದ ಕಾರ್ಯನಿರ್ವಹಿಸಲು ದ.ಕ.ಡಿಸಿ ಸೂಚನೆ

ಮಂಗಳೂರು, ಮಾ.9: ಕೊರೋನಾ ರೋಗ ತಪಾಸಣೆ ಮತ್ತು ರೋಗಿಗಳ ನಿರ್ವಹಣೆ ಕುರಿತು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಲು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದ್ದಾರೆ.

ಕೋರೋನಾ ರೋಗಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯಕೀಯ ಕಾಲೇಜುಗಳ, ವಿಮಾನ ನಿಲ್ದಾಣ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಆರೋಗ್ಯದ ಗೊಂದಲದ ಬಗ್ಗೆ ಪ್ರಸ್ತಾಪಿಸಿದ ಅವರು ಜ್ವರ ಪೀಡಿತರು ಸಂಶಯಾಸ್ಪದವಾಗಿ ಕಂಡುಬಂದರೆ ಅವರನ್ನು ವಿಮಾನ ನಿಲ್ದಾಣದಲ್ಲೇ ವೈದ್ಯರಿಂದ ಪರೀಕ್ಷೆ ನಡೆಸಿ, ಅಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಬರಬೇಕು. ಇಂತಹ ಸಂದರ್ಭ ವಿಮಾನ ನಿಲ್ದಾಣ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಡಿಸಿ ತಿಳಿಸಿದರು.

ಸಂಶಯಾಸ್ಪದ ರೋಗಿಗಳು ಪತ್ತೆಯಾದರೆ, ಅವರಿಗೆ ಕೌನ್ಸಿಲಿಂಗ್ ಮಾಡಿ ಮಾಹಿತಿ ನೀಡಬೇಕು. ರೋಗಿ ಬಯಸಿದರೆ, ಐಸೋಲೇಶನ್ ವಾರ್ಡ್ ಇರುವ ಅವರ ಇಚ್ಛೆಯ ಆಸ್ಪತ್ರೆಗೆ ದಾಖಲಾಗಬಹುದು. ಆದರೆ ರೋಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದರೆ ಸಾರ್ವಜನಿಕ ಆರೋಗ್ಯ ಸಂರಕ್ಷಣೆಯ ಹಿನ್ನಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಸೂಚಿಸಿದರು.

ಮಂಗಳೂರು ವಿಮಾನ ನಿಲ್ದಾಣಕ್ಕೆ ಜಿಲ್ಲಾಡಳಿತ ವತಿಯಿಂದ ಹೆಚ್ಚುವರಿಯಾಗಿ ವೈದ್ಯರನ್ನು ನಿಯೋಜಿಸಲಾಗುವುದು. ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ವೈದ್ಯರನ್ನು ಪ್ರತೀ ದಿನ ಪಾಳಿಯಂತೆ ಮಾ.10ರಿಂದಲೇ ನಿಯೋಜಿಸಲಾಗುವುದು. ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿನ ವ್ಯವಸ್ಥೆಯನ್ನು ಪ್ರತೀ ದಿನ ಪರಿಶೀಲಿಸಿದ ವರದಿ ನೀಡಲು ಸಿಂಧೂ ರೂಪೇಶ್ ನಿರ್ದೇಶಿಸಿದರು.

ಪ್ರಯಾಣಿಕರು ಸಹಕರಿಸಿ: ವಿದೇಶದಿಂದ ಬರುವ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ವೈದ್ಯರ ತಪಾಸಣೆಗೆ ಸಹಕರಿಸಬೇಕು. ವೈದ್ಯರ ಸಲಹೆಗೆ ಸ್ಪಂದಿಸಿ ಅವರ ಸಲಹೆಯಂತೆ ಸಹಕರಿಸಬೇಕು. ಪ್ರಯಾಣಿಕರ ಎಲ್ಲಾ ಮಾಹಿತಿಯನ್ನು ಸಂಪೂರ್ಣ ಗೌಪ್ಯವಾಗಿಡಲಾಗುವುದು ಎಂದು ಡಿಸಿ ಭರವಸೆ ನೀಡಿದರು. ಅಲ್ಲದೆ ಸಾರ್ವಜನಿಕರು ಯಾವುದೇ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಜಿಲ್ಲಾಡಳಿತ ಎಲ್ಲಾ ಮುನ್ನೆಚ್ಚರಿಕೆ ಸಿದ್ಧತೆ ಕೈಗೊಂಡಿದೆ ಎಂದು ಡಿಸಿ ಹೇಳಿದರು.

ಸ್ಯಾಂಪಲ್ ಪರೀಕ್ಷೆಗೆ: ರವಿವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬಂದ ಪ್ರಯಾಣಿಕರೊಬ್ಬರು ಜ್ವರ ಪೀಡಿತರಾಗಿ ಕಂಡುಬಂದಿದ್ದು, ಅವರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿಡಲಾಗಿದೆ. ರೋಗಿಯು ಚಿಕಿತ್ಸೆಗೆ ಸಹಕಾರ ನೀಡುತ್ತಿದ್ದಾರೆ. ಅವರ ರಕ್ತ, ಕಫದ ಮಾದರಿಯನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಪರೀಕ್ಷೆಯ ವಿವರ ನಿರೀಕ್ಷಿಸಲಾಗಿದೆ ಎಂದು ಡಿಸಿ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸಿಖಂದರ್ ಪಾಶಾ, ಮಂಗಳೂರು ಉಪ ವಿಭಾಗಾಧಿಕಾರಿ ಮದನ್ ಮೋಹನ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ವೆನ್ಲಾಕ್ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ, ವೈದ್ಯಕೀಯ ಕಾಲೇಜುಗಳ ಪ್ರತಿನಿಧಿಗಳು, ಎನ್‌ಎಂಪಿಟಿ ಮತ್ತು ವಿಮಾನ ನಿಲ್ದಾಣ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X