‘ಬೆಲ್ಕಿರಿ’ ದ್ವೈಮಾಸಿಕ ಸಂಚಿಕೆಗೆ ಲೇಖನ ಆಹ್ವಾನ
ಮಂಗಳೂರು, ಮಾ.9: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಬ್ಯಾರಿ ಭಾಷೆ, ಸಂಸ್ಕೃೃತಿ, ಸಾಹಿತ್ಯದ ಬೆಳವಣಿಗೆಗಾಗಿ ಪ್ರತೀ 2 ತಿಂಗಳಿಗೊಮ್ಮೆ ಹೊರತರುವ ‘ಬೆಲ್ಕಿರಿ’ ದ್ವೈಮಾಸಿಕ ಸಂಚಿಕೆಯಲ್ಲಿ ಪ್ರಕಟಿಸಲು ಬ್ಯಾರಿ ಇತಿಹಾಸ/ಸಂಶೋಧನಾ ಲೇಖನಗಳು/ಬ್ಯಾರಿ ಪುಸ್ತಕ ಪರಿಚಯ/ಮರೆಯಬಾರದ ಬ್ಯಾರಿ ಮಹನೀಯರು/ಬ್ಯಾರಿ ಕಥೆ/ಕವನ/ಚುಟುಕುಗಳನ್ನು ಆಹ್ವಾನಿಸಲಾಗಿದೆ.
ಟೈಪ್ ಮಾಡಿ ಕಳುಹಿಸುವುದಾದರೆ ನುಡಿ ಫಾಂಟ್‌ನಲ್ಲಿ ಕಳುಹಿಸಬೇಕು. ಹೆಸರು ಮತ್ತು ವಿಳಾಸಲ್ಲದ ಲೇಖನಗಳನ್ನು ಪ್ರಕಟಿಸಲಾಗುವುದಿಲ್ಲ. ಪ್ರಕಟಿತ ಲೇಖನಗಳ ಲೇಖಕರಿಗೆ ಗೌರವ ಸಂಭಾವನೆ ಪಾವತಿಸಲಾಗುವುದು.
ಲೇಖನಗಳನ್ನು ತಮ್ಮ ಸಂಪೂರ್ಣ ವಿಳಾಸ ಮತ್ತು ದೂರವಾಣಿ ಸಂಖ್ಯೆಯೊಂದಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ, ಹ್ಯಾಮಿಲ್ಟನ್ ಕಾಂಪ್ಲೆಕ್ಸ್, 1ನೇ ಮಹಡಿ, ಸ್ಟೇಟ್‌ಬ್ಯಾಂಕ್, ಮಂಗಳೂರು 575001 ಈ ವಿಳಾಸಕ್ಕೆ ಅಥವಾ bearyacademy@yahoo.in ಅಥವಾ ಬೆಲ್ಕಿರಿ ದ್ವೈಮಾಸಿಕ ಸಂಚಿಕೆಯ ಸಂಪಾದಕ ಮತ್ತು ಅಕಾಡಮಿಯ ಸದಸ್ಯ ಜಲೀಲ್ ಮುಕ್ರಿ (ವಾಟ್ಸಪ್ ನಂಬ್ರ 9945479369) ಇಲ್ಲಿಗೆ ಕಳುಹಿಸಿಕೊಡುವಂತೆ ಅಕಾಡಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





