ವಿಶ್ವ ಮಹಿಳಾ ದಿನಾಚರಣೆ: ಮಹಿಳಾ ಸಬಲೀಕರಣ ಸುಸ್ಥಿರ ಅಭಿವೃದ್ಧಿ ಸಂವಾದ ಸಂಕಲ್ಪ

ಮುಡಿಪು, ಮಾ.9: ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಪಂ ವ್ಯಾಪ್ತಿಯ ಹೂಹಾಕುವಕಲ್ಲು ಶಾಲಾ ಸಭಾಂಗಣದಲ್ಲಿ ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಸಬಲೀಕರಣ ಮತ್ತು ಸುಸ್ಥಿರ ಅಭಿವೃದ್ಧಿ ಕುರಿತು ಸಂವಾದ ಸಂಕಲ್ಪ ನಡೆಯಿತು.
ಜನ ಶಿಕ್ಷಣ ಟ್ರಸ್ಟ್, ಸೆಲ್ಕೋ ಪೌಂಢೇಶನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಕೈರಂಗಳ ಒಕ್ಕೂಟಗಳು ಹಾಗೂ ಗ್ರಾಪಂ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಸೋಲಾರ್ ದೀಪ ಬೆಳಗಿಸಿ ಉದ್ಘಾಟಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಮಾಜಿ ಓಂಬುಡ್ಸ್‌ಮೆನ್ ಶೀನ ಶೆಟ್ಟಿ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರದೀಪ್ ಡಿಸೋಜ, ಪಿಡಿಒ ಸುನೀಲ್ ಕುಮಾರ್ ಭಾಗವಹಿಸಿದ್ದರು.
ಜನ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೃಷ್ಣ ಮೂಲ್ಯ, ಸೆಲ್ಕೋ ಸಂಸ್ಥೆಯ ವ್ಯವಸ್ಥಾಪಕ ರವೀನಾ, ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಮೋಹಿನಿ, ವಲಯಾಧ್ಯಕ್ಷ ನವೀನ್ ಪಾದಾಲ್ಪಾಡಿ, ಸಂವಾದದಲ್ಲಿ ಭಾಗವಹಿಸಿದ್ದರು.
ಪಂಚಾಯತ್ ಸದಸ್ಯರಾದ ಜನಾರ್ಧನ್ ಕುಲಾಲ್, ಉಷಾ, ಎಸ್.ಡಿ.ಎಂ.ಸಿ. ಅಧ್ಯಕ್ಷ ನವೀನ್ ಚಂದ್ರ, ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರುಗಳಾದ ಪುಷ್ಪರಾಜ್, ಗಣೇಶ್ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಜನ ಶಿಕ್ಷಣ ಟ್ರಸ್ಟ್ ಸಂಯೋಜಕರು, ಪ್ರೇರಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಿಓಡಿಪಿ, ಒಡಿಯೂರು, ಮೈತ್ರಿ, ನವೋದಯ ಸ್ವ ಸಹಾಯ ಸಂಘಗಳ ಪ್ರತಿನಿಧಿಗಳು, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಮಂಗಳೂರು ರಥ ಬೀದಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿಗಳು, ಎಸ್.ಡಿ.ಎಂ.ಸಿ ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ನಿರತೆ ನಳಿನಾಕ್ಷಿ ಧನ್ಯವಾದ ಸಲ್ಲಿಸಿದರು. ಕೋಣಾಜೆ ಸ್ಕಿಲ್ ಸ್ಕೂಲ್‌ನ ವಿದ್ಯಾರ್ಥಿಗಳು ಸ್ವಚ್ಛತೆ ಸಂದೇಶ ಸಾರುವ ಬೀದಿ ನಾಟಕ ಪ್ರದರ್ಶಿಸಿದರು. ಸುಸ್ಥಿರ ಇಂಧನ ಶೌರ ಶಕ್ತಿ ಕುರಿತ ಪ್ರಾತ್ಯಕ್ಷಿಕೆಯನ್ನು ಸೆಲ್ಕೋ ಪೌಂಢೇಶನ್ ಏರ್ಪಾಡಿಸಿತ್ತು.







