ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರನ್ನು ಸಂಪರ್ಕಿಸಿದ ನಿರ್ಭಯಾ ಹಂತಕ

ಹೊಸದಿಲ್ಲಿ, ಮಾ. 9: ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ನಾಲ್ವರು ಆರೋಪಿಗಳಲ್ಲಿ ಓರ್ವನಾದ ವಿನಯ್ ಶರ್ಮಾ ತನ್ನ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವಂತೆ ಕೋರಿ ವಕೀಲ ಎ.ಪಿ. ಸಿಂಗ್ ಮೂಲಕ ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರನ್ನು ಸಂಪರ್ಕಿಸಿದ್ದಾನೆ. ಮರಣದಂಡನೆಯನ್ನು ರದ್ದುಗೊಳಿಸುವಂತೆ ಕೋರಿ ಕಲಂ 432 ಹಾಗೂ 433ರ ಅಡಿಯಲ್ಲಿ ಎ.ಪಿ. ಸಿಂಗ್ ಮನವಿ ಸಲ್ಲಿಸಿದ್ದಾರೆ.
ಅತಿ ಅಪರೂಪದ ಪ್ರಕರಣಗಳಲ್ಲಿ ಮಾತ್ರ ಮರಣದಂಡನೆ ವಿಧಿಸಲಾಗುತ್ತದೆ. ಆದುದರಿಂದ ವಿನಯ್ ಶರ್ಮಾ ಮರಣದಂಡನೆಗೆ ವಿನಾಯತಿ ನೀಡಿ ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಎ.ಪಿ. ಸಿಂಗ್ ಹೇಳಿದ್ದಾರೆ. ಸುಧಾರಣೆಯತ್ತ ಸಕಾರಾತ್ಮಕ ಹೆಜ್ಜೆಗಳು, ಎಳೆಯ ಪ್ರಾಯ, ಬಡತನದ ಸಾಮಾಜಿಕ-ಆರ್ಥಿಕ ಪರಿಸ್ಥಿತಿ ಪರಿಗಣಿಸಿ ತನ್ನ ಕಕ್ಷಿದಾರನಿಗೆ ವಿಧಿಸಲಾದ ಮರಣದಂಡನೆಯನ್ನು ಜೀವಾವಾಧಿ ಶಿಕ್ಷೆಗೆ ಪರಿವರ್ತಿಸುವಂತೆ ಅವರು ಮನವಿ ಮಾಡಿದ್ದಾರೆ.
Next Story





