Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ಫೋಟದಿಂದ ಗಾಯಗೊಂಡಿದ್ದ ವ್ಯಕ್ತಿಯ...

ಸ್ಫೋಟದಿಂದ ಗಾಯಗೊಂಡಿದ್ದ ವ್ಯಕ್ತಿಯ ಚಿಕಿತ್ಸಾ ವೆಚ್ಚ ಭರಿಸಿದ ಬಿಬಿಎಂಪಿ

ವಾರ್ತಾಭಾರತಿವಾರ್ತಾಭಾರತಿ9 March 2020 10:52 PM IST
share
ಸ್ಫೋಟದಿಂದ ಗಾಯಗೊಂಡಿದ್ದ ವ್ಯಕ್ತಿಯ ಚಿಕಿತ್ಸಾ ವೆಚ್ಚ ಭರಿಸಿದ ಬಿಬಿಎಂಪಿ

ಬೆಂಗಳೂರು, ಮಾ.9: ದಕ್ಷಿಣ ವಲಯದ ಡೈರಿ ವೃತ್ತ(ಆಡುಗೋಡಿ)ದ ಬಳಿ ಸ್ಫೋಟ ಸಂಭವಿಸಿ ಕಾಲಿಗೆ ಗಂಭೀರ ಗಾಯವಾಗಿದ್ದ ಚಂದ್ರಪ್ಪ ನಗರ ನಿವಾಸಿ ನರಸಿಂಹಯ್ಯ ಅವರು ಸಂಜಯ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಮೇಯರ್ ಗೌತಮ್ ಕುಮಾರ್ ಹಾಗೂ ಆಯುಕ್ತ ಅನಿಲ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸಾ ವೆಚ್ಚ ಭರಿಸುವುದಾಗಿ ತಿಳಿಸಿದ್ದಾರೆ.

ಎಂಬ ವ್ಯಕ್ತಿ ಕಸದಲ್ಲಿ ಗ್ರಾನೈಟ್ ಕಾಮಗಾರಿಗಳಿಗೆ ಬಳಸುವ ರಾಸಾಯನಿಕ ಅಂಶದ ಮೇಲೆ ಕಾಲಿಟ್ಟ ಪರಿಣಾಮ ಸ್ಫೋಟಗೊಂಡು ಕಾಲಿಗೆ ಗಂಭೀರ ಗಾಯವಾಗಿ ಸಂಜಯಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಮೇಯರ್ ಗೌತಮ್ ಕುಮಾರ್ ಹಾಗೂ ಆಯುಕ್ತ ಅನಿಲ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸಾ ವೆಚ್ಚ ಭರಿಸುವುದಾಗಿ ತಿಳಿಸಿದ್ದಾರೆ.

ಬಳಿಕ ಸ್ಫೋಟಗೊಂಡ ಸ್ಥಳ ತಪಾಸಣೆ ನಡೆಸಿ, ರಸ್ತೆಬದಿಯಲ್ಲಿ ಕಸ ಬಿಸಾಡುವ ಹಾಗೂ ರಸ್ತೆಯಲ್ಲಿ ಕೆಮಿಕಲ್ ಬಿಸಾಡಿದವರನ್ನು ಗುರುತಿಸಿ ಕಾನೂನು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ಪಕ್ಕದ ಖಾಲಿ ಜಾಗದಲ್ಲಿ ಕಟ್ಟಡ ತ್ಯಾಜ್ಯ ಸುರಿಯಲಾಗಿದ್ದು, ಅದನ್ನು ತೆರವುಗೊಳಿಸಿರುವುದಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮೆಟ್ರೊ ಕಾಮಗಾರಿ ನಡೆಯುತ್ತಿದ್ದು, ಡೆಬ್ರಿಸ್ ರಸ್ತೆ ಮಾರ್ಗದಲ್ಲೇ ಬಿಟ್ಟಿರುವುದರಿಂದ ಬಿಎಂಆರ್‌ಸಿಎಲ್ ಗೆ ನೋಟಿಸ್ ನೀಡಿ ಡೆಬ್ರಿಸ್ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ತಿಳಿಸಿದರು.

ತದನಂತರ ದಕ್ಷಿಣ ವಲಯದ ಜಯನಗರ ವಾರ್ಡ್ ವ್ಯಾಪ್ತಿಯ ಸಿದ್ದಾಪುರ ಮುಖ್ಯರಸ್ತೆ(8ನೇ ಮುಖ್ಯ ರಸ್ತೆ)ಯಲ್ಲಿ ಬೀದಿ ಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ವ್ಯಾಪಾರ ಮಾಡುತ್ತಿರುವ ಸ್ಥಳವನ್ನು ತಪಾಸಣೆ ನಡೆಸಲಾಯಿತು. ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿಕೊಂಡು ತಳ್ಳುವ ಗಾಡಿಗಳ ಮೂಲಕ ಹಣ್ಣು, ಹೊಟೇಲ್, ಬಟ್ಟೆ ಸೇರಿದಂತೆ ಇನ್ನಿತರ ಮಳಿಗಗಳನ್ನಿಟ್ಟು ಮಾರಾಟ ಮಾಡಲಾಗುತ್ತಿದೆ. ಜೊತೆಗೆ ಹಲವು ತಿಂಗಳುಗಳಿಂದ ವಾಹನಗಳನ್ನು ಪಾದಚಾರಿ ಮಾರ್ಗದಲ್ಲಿಯೇ ನಿಲ್ಲಿಸಲಾಗಿದೆ. ಇದರಿಂದ ಸಾರ್ವಜನಿಕರ ಓಡಾಟಕ್ಕೆ ತುಂಬಾ ತೊಂದರೆಯಾಗುತ್ತದೆ. ಜೊತೆಗೆ ಈ ಭಾಗದ ಸುತ್ತಲೂ ಆಸ್ಪತ್ರೆಗಳಿದ್ದು, ಶುಚಿತ್ವ ಕಾಪಾಡುವುದು ಪ್ರಮುಖ ಕೆಲಸವಾಗಿರುತ್ತದೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ತಿಳಿಸಿ ಕೂಡಲೆ ಒತ್ತುವರಿ ತೆರವು ಕಾರ್ಯಾಚರಣೆ ಪ್ರಾರಂಭಿಸುವಂತೆ ಸೂಚಿಸಿದರು.

ಅದಲ್ಲದೆ ರಸ್ತೆ ಬದಿಯಲ್ಲಿ ಕಸ ಬಿಸಾಡುವ ಸ್ಥಳ(ಬ್ಲಾಕ್ ಸ್ಪಾಟ್) ಬಳಿ ಪರಿಶೀಲನೆ ನಡೆಸಿ ರಸ್ತೆ ಬದಿ ಕಸ ಬಿಸಾಡದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾದಚಾರಿ ಒತ್ತುವರಿ ತೆರವು ಕಾರ್ಯಾಚರಣೆ ಪ್ರಾರಂಭ: ಸಿದ್ದಾಪುರ ಮುಖ್ಯ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ವ್ಯಾಪಾರ ಮಾಡುತ್ತಿರುವ ಮಳಿಗೆಗಳನ್ನು ಪಾಲಿಕೆ ಸಿಬ್ಬಂದಿ ಸಹಕಾರದಲ್ಲಿ ತೆರವು ಕಾರ್ಯಾಚರಣೆ ಹಮ್ಮಿಕೊಂಡಿದ್ದು, ತಳ್ಳುವ ಗಾಡಿಗಳನ್ನು ಪಾಲಿಕೆ ವಾಹನದಲ್ಲಿ ಹಾಕಿ ಸಾರ್ವಜನಿಕರ ಸುಗಮ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ. ಅಲ್ಲದೆ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ವ್ಯಾಪಾರ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X