ಜಮ್ಮು -ಕಾಶ್ಮೀರ : ಇಬ್ಬರು ಉಗ್ರರ ಹತ್ಯೆ

ಶ್ರೀನಗರ, ಮಾ.9: ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ ಅಧಿಕಾರಿಗಳು ಹೇಳಿದ್ದಾರೆ.
ದಕ್ಷಿಣ ಕಾಶ್ಮೀರದ ರೆಬಾನ್ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಉಗ್ರರ ಚಲನವಲನದ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಅಲ್ಲಿಗೆ ಧಾವಿಸಿದ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆಗ ಅಲ್ಲಿ ಅಡಗಿ ಕುಳಿತಿದ್ದ ಉಗ್ರರು ಗುಂಡಿನ ದಾಳಿ ಆರಂಭಿಸಿದಾಗ ಭದ್ರತಾ ಪಡೆಯವರು ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿದ್ದು ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Next Story





