ರಾಜ್ಯ ಸರಕಾರದಿಂದ ಬಿಸಿಯೂಟ ನೌಕರರಿಗೆ ಮೋಸ: ಕೆ.ಶಂಕರ್

ಉಡುಪಿ, ಮಾ.10: ಬಿಜೆಪಿ ಸರಕಾರ ಸರ್ವಾಧಿಕಾರಿಯಾಗಿ ವರ್ತಿಸುತ್ತಿದೆ. ದೇಶದ ಅಭಿವೃದ್ಧಿಯಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತಿರುವ ದುಡಿಯುವ ವರ್ಗವನ್ನು ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಬಿಸಿಯೂಟ ನೌಕರರ ವೇತನ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾಪ ಮಾಡದೇ ಸರಕಾರ ಮೋಸ ಮಾಡಿದೆ ಎಂದು ಸಿಐಟಿಯು ಉಡುಪಿ ಜಿಲ್ಲಾಧ್ಯಕ್ಷ ಕೆ.ಶಂಕರ್ ಆರೋಪಿಸಿದ್ದಾರೆ.
ರಾಜ್ಯ ಸರಕಾರ ಈ ಬಾರಿಯ ಬಜೆಟ್‌ನಲ್ಲಿ ಬಿಸಿಯೂಟ ನೌಕರರಿಗೆ ಮೋಸ ಮಾಡಿರುವುದಾಗಿ ಆರೋಪಿಸಿ ಸಿಐಟಿಯು ಉಡುಪಿ ತಾಲೂಕು ಸಮಿತಿ ಮಂಗಳವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಹಮ್ಮಿಕೊಂಡ ಧರಣಿಯನ್ನು್ದೇಶಿಸಿ ಅವರು ಮಾತನಾಡುತಿದ್ದರು.
ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಗೌರವಾಧ್ಯಕ್ಷ ಯು.ದಾಸು ಭಂಡಾರಿ ಮಾತನಾಡಿ, ರಾಜ್ಯದಲ್ಲಿ 1 ಲಕ್ಷದ 18 ಸಾವಿರ ಬಿಸಿಯೂಟ ಕಾರ್ಯಕರ್ತೆ ಯರು ದುಡಿಯುತ್ತಿದ್ದು, ಅವರನ್ನು ನೌಕರರೆಂದು ಪರಿಗಣಿಸಿ, ಸಮಾನ ವೇತನ, ಪಿಂಚಣಿ, ಇಎಸ್‌ಐ ಸೌಲಭ್ಯಗಳನ್ನು ಒದಗಿಸ ಬೇಕು. ಜೀವನ ನಿರ್ವಹಣೆ ಮಾಡಲು ಬೇಕಾಗುವಷ್ಟು ವೇತನ ಹೆಚ್ಚಳ ಮಾಡಬೇಕು. ಬಿಸಿಯೂಟ ಯೋಜನೆಯನ್ನು ಕೂಡ ಸರಕಾರ ಎಲ್ಐಸಿ, ಬಿಎಸ್‌ಎನ್‌ಎಲ್, ಇಂಡಿ ಯನ್ ಏರ್‌ಲೈನ್ಸ್ ಮಾದರಿಯಲ್ಲಿ ಖಾಸಗೀಕರಣಗೊಳಿಸಲು ಹುನ್ನಾರ ನಡೆಸುತ್ತಿದೆ ಎಂದು ಅವರು ದೂರಿದರು.
ಸಿಐಟಿಯು ಜಿಲ್ಲಾ ಖಜಾಂಚಿ ಶಶಿಧರ್ ಗೊಲ್ಲ ಮಾತನಾಡಿ, ಇಂದು ದೇಶದ ಆರ್ಥಿಕ ಪರಿಸ್ಥಿತಿ ನೆಲಕಚ್ಚಿದ್ದು, ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯು ದುಸ್ಥಿತಿಯಲ್ಲಿದೆ. ಈ ಮೂಲಕ ಬಿಜೆಪಿಗೆ ಆಡಳಿತ ನಡೆಸಲು ಗೊತ್ತಿಲ್ಲ ಎಂಬುದು ಸಾಬೀತುಪಡಿಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮಹಿಳೆಯ ರಿಗೆ ಸೌಲಭ್ಯಗಳನ್ನು ನೀಡುವುದಾಗಿ ಭರವಸೆ ನೀಡಿದ ಪಕ್ಷಗಳು, ಇಂದು ಅಧಿಕಾರಕ್ಕೆ ಬಂದ ನಂತರ ಮಹಿಳೆಯರನ್ನೇ ಮರೆತುಬಿಟ್ಟಿದೆ ಎಂದು ಟೀಕಿಸಿದರು.
ಧರಣಿಯಲ್ಲಿ ಸಂಘದ ಉಡುಪಿ ತಾಲೂಕು ಅಧ್ಯಕ್ಷೆ ಸುನಂದ, ಕಾರ್ಯದರ್ಶಿ ಕಮಲ, ಪದಾಧಿಕಾರಿಗಳಾದ ಗಿರಿಜಾ, ರತ್ನ, ಸಿಐಟಿಯು ಉಡುಪಿ ತಾಲೂಕು ಅಧ್ಯಕ್ಷ ರಾಮ ಕರ್ಕಡ, ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್., ಉಮೇಶ್ ಕುಂದರ್, ನಳಿನಿ ೊದಲಾದವರು ಉಪಸ್ಥಿತರಿದ್ದರು.








