Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಟಲಿ: ದೇಶಾದ್ಯಂತ ಬೀಗಮುದ್ರೆ

ಇಟಲಿ: ದೇಶಾದ್ಯಂತ ಬೀಗಮುದ್ರೆ

ಎಪ್ರಿಲ್ 3ರವರೆಗೆ ಜನರ ಓಡಾಟಕ್ಕೆ ನಿರ್ಬಂಧ

ವಾರ್ತಾಭಾರತಿವಾರ್ತಾಭಾರತಿ10 March 2020 9:38 PM IST
share
ಇಟಲಿ: ದೇಶಾದ್ಯಂತ ಬೀಗಮುದ್ರೆ

ರೋಮ್ (ಇಟಲಿ), ಮಾ. 10: ಮಾರಕ ಕೊರೋನವೈರಸ್ ಸೋಂಕು ಹರಡುವುದನ್ನು ತಡೆಯಲು ಅಸಾಧಾರಣ ಕ್ರಮಗಳನ್ನು ಕೈಗೊಂಡಿರುವ ಇಟಲಿ, ಮಂಗಳವಾರ ಇಡೀ ದೇಶದಲ್ಲಿ ಬೀಗಮುದ್ರೆ ಘೋಷಿಸಿದೆ ಹಾಗೂ ಜನರ ಸಂಚಾರವನ್ನು ನಿರ್ಬಂಧಿಸಿದೆ.

ಮದುವೆ ಮತ್ತು ಅಂತ್ಯಸಂಸ್ಕಾರಗಳನ್ನು ಮೂರು ವಾರಗಳಿಗೂ ಅಧಿಕ ಅವಧಿಗೆ ನಿಷೇಧಿಸಲಾಗಿದೆ ಹಾಗೂ ಸಂಜೆ 6 ಗಂಟೆಗೆ ಮುಚ್ಚುವಂತೆ ಬಾರ್‌ ಗಳು ಮತ್ತು ರೆಸ್ಟೋರೆಂಟ್ ‌ಗಳಿಗೆ ಸೂಚಿಸಲಾಗಿದೆ. ಮನೆಯಲ್ಲೇ ಉಳಿಯುವಂತೆ ಪ್ರಧಾನಿ ದೇಶದ ಜನತೆಯನ್ನು ಒತ್ತಾಯಿಸಿದ್ದಾರೆ.

ಈ ಮೊದಲು, ಇಟಲಿಯ ಹಲವು ಪ್ರದೇಶಗಳಲ್ಲಿ ಜಾರಿಯಲ್ಲಿದ್ದ ಬೀಗಮುದ್ರೆಯನ್ನು ಈಗ ಇಡೀ ದೇಶಕ್ಕೆ ವಿಸ್ತರಿಸಲಾಗಿದೆ. ಈ ನಿರ್ಬಂಧವು ಎಪ್ರಿಲ್ 3ರವರೆಗೆ ಚಾಲ್ತಿಯಲ್ಲಿರುತ್ತದೆ. ಇಟಲಿಯ 6 ಕೋಟಿಗೂ ಅಧಿಕ ಜನಸಂಖ್ಯೆಯ ಚಲನವಲನಗಳ ಮೇಲೆ ನಿರ್ಬಂಧಗಳನ್ನು ವಿಧಿಸುವ ಆದೇಶಕ್ಕೆ ಸೋಮವಾರ ರಾತ್ರಿ ಸಹಿ ಹಾಕಲಾಗಿದೆ.

 ಯುರೋಪ್‌ನಲ್ಲಿ ಇಟಲಿಯು ಕೊರೋನವೈರಸ್‌ನಿಂದ ಅತಿ ಹೆಚ್ಚು ಬಾಧೆಗೊಳಗಾದ ದೇಶವಾಗಿದೆ. ಅಲ್ಲಿ ಈವರೆಗೆ 400ಕ್ಕೂ ಅಧಿಕ ಸಾವುಗಳು ಸಂಭವಿಸಿವೆ ಹಾಗೂ 9,000ಕ್ಕೂ ಅಧಿಕ ಮಂದಿ ಸೋಂಕಿಗೆ ಒಳಗಾಗಿದ್ದಾರೆ.

‘‘ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರಣಕ್ಕಾಗಿ ಜನರು ಸೇರುವುದನ್ನು ನಿಷೇಧಿಸಲಾಗಿದೆ’’ ಎಂದು ಆದೇಶ ತಿಳಿಸಿದೆ. ಎಲ್ಲಾ ಮಟ್ಟಗಳಲ್ಲಿ ನಡೆಯುವ ಎಲ್ಲಾ ಕ್ರೀಡಾಕೂಟಗಳನ್ನು ರದ್ದುಪಡಿಸಲಾಗಿದೆ.

ಆರೋಗ್ಯ ಕಾರಣಗಳಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ

ಹೊಸ ನಿಯಮಗಳ ಪ್ರಕಾರ, ಅತಿ ತುರ್ತು ಕೆಲಸಗಳು ಅಥವಾ ಆರೋಗ್ಯ ಕಾರಣಗಳಿಗಾಗಿ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಬೇರೆ ಸ್ಥಳಗಳಿಂದ ತಮ್ಮ ಮನೆಗಳಿಗೆ ವಾಪಸಾಗಲು ಜನರಿಗೆ ಅವಕಾಶ ನೀಡಲಾಗಿದೆ.

ಶಾಲೆಗಳು ಮತ್ತು ಕಾಲೇಜುಗಳಿಗೆ ತಕ್ಷಣದಿಂದ ರಜೆ ಸಾರಲಾಗಿದೆ ಹಾಗೂ ಉದ್ಯೋಗಿಗಳಿಗೆ ರಜೆ ನೀಡುವಂತೆ ಉದ್ಯಮಗಳನ್ನು ಒತ್ತಾಯಿಸಲಾಗಿದೆ.

ಜೈಲುಗಳಲ್ಲಿ ದೊಂಬಿ: ಹಲವು ಕೈದಿಗಳು ಸಾವು

ಇಟಲಿಯನ್ನು ಕೊರೋನವೈರಸ್ ಸಾಂಕ್ರಾಮಿಕ ಆವರಿಸಿರುವಂತೆಯೇ, ಅಲ್ಲಿನ ಜೈಲುಗಳಲ್ಲಿರುವ ಕೈದಿಗಳು ಭಯಭೀತರಾಗಿದ್ದಾರೆ. ಅಲ್ಲಿನ 23 ಜೈಲುಗಳಲ್ಲಿ ಕೈದಿಗಳು ಗಲಭೆ ನಡೆಸಿದ್ದು ಹಲವಾರು ಮಂದಿ ಮೃತಪಟ್ಟಿದ್ದಾರೆ.

ಕೊರೋನವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತಮಗೆ ಕ್ಷಮಾದಾನ ನೀಡಬೇಕೆಂದು ಕೆಲವು ಕೈದಿಗಳು ಒತ್ತಾಯಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X