ರಮೇಶ್ ಕುಮಾರ್ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಮಾ.10: ರಮೇಶ್ ಕುಮಾರ್ ವಿರುದ್ಧ ನಾಳೆ ನಾವು ಹಕ್ಕುಚ್ಯುತಿ ಮಂಡನೆ ಮಾಡುತ್ತೇವೆ. ಅಲ್ಲದೇ, ಈ ಅಧಿವೇಶನ ಮುಗಿಯುವವರೆಗೆ ಅವರನ್ನು ಸದನದಿಂದ ಅಮಾನತ್ತು ಮಾಡುವಂತೆ ಒತ್ತಾಯಿಸುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಅಧಿವೇಶನ ಮುಗಿಯುವವರೆಗೂ ರಮೇಶ್ ಕುಮಾರ್ ಅವರನ್ನು ಉಚ್ಛಾಟಿಸಬೇಕು ಎಂದು ನಾನು ನಾಳೆ ಸ್ಪೀಕರ್‌ಗೆ ದೂರು ಸಲ್ಲಿಸುತ್ತೇನೆ ಎಂದರು.
ಸದನದ ಗೌರವ ಉಳಿಸುವ ಕೆಲಸ ಮಾಡಬೇಕು. ಆದರೆ, ವಿಪಕ್ಷಗಳು ನನ್ನ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಿದ್ದಾರೆ. ನಾವು ಸಹ ಹಕ್ಕುಚ್ಯುತಿ ಮಂಡನೆ ಮಾಡಿ, ರಮೇಶ್ ಕುಮಾರ್ ಉಚ್ಛಾಟನೆಗೆ ಒತ್ತಾಯಿಸುತ್ತೇವೆ ಎಂದು ಅವರು ಹೇಳಿದರು.
Next Story





