ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹ ಧನ; ಅರ್ಜಿ ಆಹ್ವಾನ
ಉಡುಪಿ, ಮಾ.10: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಕನಿಷ್ಠ 18ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸೆಸೆಲ್ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಕೃತಿ ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ ಕನಿಷ್ಠ 60 ಪುಟಗಳಿರಬೇಕು. ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತ ಪ್ರತಿ ಇರಬೇಕು. ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವ ವಿಷಯ/ ಸಂಗತಿಗಳು ಪ್ರಸ್ತಾಪವಾಗಿರಬಾರದು.
ಅರ್ಜಿಗಳನ್ನು ಎಪ್ರಿಲ್ 15ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸ ಬೇಕು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು (ದೂರವಾಣಿ:080-22484516/22017704) ಇವರನ್ನು ಸಂಪರ್ಕಿಸುವಂತೆ ಪ್ರಾಧಿಕಾರದ ಆಡಳಿತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.







