Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಬುರಗಿಯ ಮೃತ ವ್ಯಕ್ತಿಯಲ್ಲಿ ಕೊರೋನ...

ಕಲಬುರಗಿಯ ಮೃತ ವ್ಯಕ್ತಿಯಲ್ಲಿ ಕೊರೋನ ವೈರಸ್ ದೃಢಪಟ್ಟಿಲ್ಲ: ಸಚಿವ ಶ್ರೀರಾಮುಲು

ವಾರ್ತಾಭಾರತಿವಾರ್ತಾಭಾರತಿ11 March 2020 4:11 PM IST
share
ಕಲಬುರಗಿಯ ಮೃತ ವ್ಯಕ್ತಿಯಲ್ಲಿ ಕೊರೋನ ವೈರಸ್ ದೃಢಪಟ್ಟಿಲ್ಲ: ಸಚಿವ ಶ್ರೀರಾಮುಲು

ಬೆಂಗಳೂರು, ಮಾ.11: ಸೌದಿ ಅರೇಬಿಯಾದಿಂದ ಹಿಂದಿರುಗಿದ್ದ ಕಲಬುರಗಿಯ 76 ವರ್ಷದ ವೃದ್ಧ ಕೊರೋನ ವೈರಸ್‌ನಿಂದ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೃತ ವ್ಯಕ್ತಿಯಲ್ಲಿ ಕೊರೋನ ಸೋಂಕಿಗೆ ಸಂಬಂಧಿಸಿದ ಯಾವ ಲಕ್ಷಣಗಳು ಇರಲಿಲ್ಲ. ಅವರ ಗಂಟಲು ದ್ರಾವಣ ಪರೀಕ್ಷೆ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದಿದೆ ಎಂದರು.

ಮೃತರು ಫೆ.29ರಂದು ಸೌದಿಯಿಂದ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಮಾ.5ರಂದು ಅವರ ಪರೀಕ್ಷೆ ನಡೆಸಿ, ಮಾ.6ರಂದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಾ.9ರಂದು ಅವರು ಸ್ವ ಇಚ್ಛೆಯಿಂದ ಹೈದರಾಬಾದ್‌ಗೆ ಹೋಗಿದ್ದರು ಎಂದು ಶ್ರೀರಾಮುಲು ಮಾಹಿತಿ ನೀಡಿದರು.

ಅಸ್ತಮಾ, ರಕ್ತದೊತ್ತಡ, ಹೈಪರ್ ಟೆನ್ಷನ್‌ಯಿಂದ ಬಳಲುತ್ತಿದ್ದ ಅವರಲ್ಲಿ, ಕೊರೋನ ಸೋಂಕಿನ ಯಾವ ಲಕ್ಷಣಗಳು ದೃಢಪಟ್ಟಿಲ್ಲ ಎಂಬುದು ವೈದ್ಯಕೀಯ ಪರೀಕ್ಷೆಯಲ್ಲಿ ತಿಳಿಸಲಾಗಿದೆ. ಈಗಾಗಲೆ ರಾಜ್ಯದಲ್ಲಿ ಈ ಸಂಬಂಧ ಸುಮಾರು ಒಂದು ಲಕ್ಷ ಜನರನ್ನು ತಪಾಣೆಗೆ ಒಳಪಡಿಸಲಾಗಿದ್ದು, ಏಳು ಮಂದಿಯನ್ನು ಶಂಕಿತರೆಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.

ಈ ಏಳು ಮಂದಿಯ ಪೈಕಿ ಐವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸುಮಾರು 1142 ಮಂದಿ ಭಯಭೀತರಾಗಿ ಸ್ವಯಂಪ್ರೇರಿತವಾಗಿ ಆಸ್ಪತ್ರೆಗಳಿಗೆ ತಪಾಸಣೆಗೆ ಬಂದಿದ್ದಾರೆ. ರಾಜ್ಯದ ಜನತೆ ಈ ಬಗ್ಗೆ ಯಾವುದೆ ಆತಂಕಕ್ಕೆ ಒಳಗಾಗುವುದು ಬೇಡ. ರಾಜ್ಯ ಸರಕಾರವು ಕೊರೋನ ವೈರಸ್ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಶ್ರೀರಾಮುಲು ತಿಳಿಸಿದರು.

ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, #COVID19 ಶಂಕಿತರೇ ಹೊರತು ದೃಡಪಟ್ಟಿಲ್ಲ. ನಾಗರಿಕರ ಹಿತದೃಷ್ಟಿಯಿಂದ, ಮೃತರ ಅಂತ್ಯಸಂಸ್ಕಾರಕ್ಕಾಗಿ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾ ಆರೋಗ್ಯ ಇಲಾಖೆಯು ಕೈಗೊಂಡಿದೆ. ಇದರಲ್ಲಿ ಯಾವುದೇ ಅನಗತ್ಯ ಗೊಂದಲ, ಭಯ ಸೃಷ್ಟಿಸುವುದು ಬೇಡ #CovidUpdate

— B Sriramulu (@sriramulubjp) March 11, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X