ಖಾಸಗಿ ಕಂಪೆನಿ ಇಂಜಿನಿಯರ್ ವಿದ್ಯುತ್ ತಂತಿ ತಗುಲಿ ಮೃತ್ಯು

ಸಾಂದರ್ಭಿಕ ಚಿತ್ರ
ಬೆಂಗಳೂರು, ಮಾ.11: ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಎಲೆಕ್ಟ್ರಾನಿಕ್ ಇಂಜಿನಿಯರ್ ಮೃತಪಟ್ಟಿರುವ ಘಟನೆ ಇಲ್ಲಿನ ವೈಟ್ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ಚಂದ್ರಶೇಖರ್(26) ಮೃತ ಇಂಜಿನಿಯರ್ ಎಂದು ತಿಳಿದುಬಂದಿದೆ.
ಒಂದು ವರ್ಷದ ಹಿಂದಷ್ಟೇ ಕೆಲಸಕ್ಕೆ ಸೇರಿದ್ದು, ವಿದ್ಯುತ್ ನಿರ್ವಹಣಾ ವಿಭಾಗದ ಜವಾಬ್ದಾರಿ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಎಂದಿನಂತೆ ಸೋಮವಾರ ರಾತ್ರಿ ಕಂಪೆನಿ ಕಚೇರಿಗೆ ಬಂದಿದ್ದ ಚಂದ್ರಶೇಖರ್, ಕೆಲಸದಲ್ಲಿ ತೊಡಗಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಮತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ ಕಂಪೆನಿಯ ನಿರ್ಲಕ್ಷದಿಂದಲೇ ತಮ್ಮ ಮಗ ಸಾವನ್ನಪ್ಪಿದ್ದಾನೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೃತನ ಪೋಷಕರ ದೂರು ಆಧರಿಸಿ ಕಂಪೆನಿ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story





