Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಗಾಂಧಿ ಚುನಾವಣೆಗೆ ನಿಂತರೂ...': ರಾಜಕೀಯ...

'ಗಾಂಧಿ ಚುನಾವಣೆಗೆ ನಿಂತರೂ...': ರಾಜಕೀಯ ವ್ಯವಸ್ಥೆಯ ಬಗ್ಗೆ ಸಿ.ಟಿ.ರವಿ ಹೇಳಿದ್ದು ಹೀಗೆ...

ವಾರ್ತಾಭಾರತಿವಾರ್ತಾಭಾರತಿ11 March 2020 7:18 PM IST
share
ಗಾಂಧಿ ಚುನಾವಣೆಗೆ ನಿಂತರೂ...: ರಾಜಕೀಯ ವ್ಯವಸ್ಥೆಯ ಬಗ್ಗೆ ಸಿ.ಟಿ.ರವಿ ಹೇಳಿದ್ದು ಹೀಗೆ...

ಬೆಂಗಳೂರು, ಮಾ.11: ದೇಶದಲ್ಲಿ ರಾಜಕೀಯ ವ್ಯವಸ್ಥೆ ಬೆತ್ತಲೆಯಾಗಿದ್ದು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯೇ ನೇರವಾಗಿ ಚುನಾವಣೆ ಸ್ಪರ್ಧೆ ಮಾಡಿದರೂ ನೀನು ಬೇಡ, ನಿನ್ನ ಭಾವಚಿತ್ರವಿರುವ ನೋಟು ಬೇಕು ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಬುಧವಾರ ವಿಧಾನಪರಿಷತ್‌ನಲ್ಲಿ ಸಂವಿಧಾನದ ಮೇಲಿನ ವಿಶೇಷ ಚರ್ಚೆಯಲ್ಲಿ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಮಾತನಾಡುತ್ತಾ, ಚುನಾವಣೆ ವ್ಯವಸ್ಥೆ ಭ್ರಷ್ಟವಾಗಿದೆ. ಇತ್ತೀಚಿಗೆ ನಡೆದ ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯಿತು ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿಯ ಸದಸ್ಯರಾದ ತೇಜಸ್ವಿನಿಗೌಡ, ರವಿಕುಮಾರ್ ಹಾಗೂ ಸಚಿವ ಸಿ.ಟಿ.ರವಿ ಮಾತನಾಡಿದರು.

ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿ, ಇಂದಿನ ಚುನಾವಣೆ ವ್ಯವಸ್ಥೆ ಪೂರ್ತಿ ಭ್ರಷ್ಟಗೊಂಡಿದೆ. ಆಯಾ ಪಕ್ಷಗಳ ಅಧಿಕಾರದ ಅವಧಿಯಲ್ಲಿ ಹೇಗೆ ಬೇಕೋ ಹಾಗೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ನಾವು ಚಿಕ್ಕವರಿದ್ದಾಗ ಚುನಾವಣೆಯಲ್ಲಿ ಯಾರಾದರೂ ನಿರ್ದಿಷ್ಟ ಪ್ರದೇಶಗಳಲ್ಲಿ ಪಾಕೆಟ್ ಹಂಚಿದರೆ ದೊಡ್ಡ ಸುದ್ದಿಯಾಗುತ್ತಿತ್ತು. ಈಗ ಚುನಾವಣೆಯಲ್ಲಿ ಹಣ, ಹೆಂಡ ಇಲ್ಲದಿದ್ದರೆ ಮತದಾರರು ಕೈ-ಬಾಯಿ ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು.

ಈ ನಡುವೆ ಮಧ್ಯಪ್ರವೇಶಿಸಿದ ಜೆಡಿಎಸ್‌ನ ರಮೇಶ್‌ ಗೌಡ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಇಡೀ ವ್ಯವಸ್ಥೆಯನ್ನೇ ಹಾಳು ಮಾಡಿದ್ದೀರಿ. ಮಂಡ್ಯ ಉಪ ಚುನಾವಣೆಯಲ್ಲಿ ಗೆಲ್ಲಲು ನೀವು ಎಷ್ಟು ಹಣ ಹಂಚಿದ್ದೀರಿ ಎಂದು ಪ್ರಶ್ನಿಸಿದರು. ಇದಕ್ಕೆ ಆಕ್ಷೇಪಿಸಿದ ಬಿಜೆಪಿಯ ತೇಜಸ್ವಿನಿ, ರಮೇಶ್, ಪ್ರಾಣೇಶ್, ನಾರಾಯಣಸ್ವಾಮಿ, ಮಂಡ್ಯದಲ್ಲಿ ಚುನಾವಣೆ ನಡೆದಾಗ ನೀವು ಎಷ್ಟು ಹಣ ಖರ್ಚು ಮಾಡಿದ್ದೀರಿ ಎಂಬುದು ಎಲ್ಲರಿಗೂ ಗೊತ್ತು ಎಂದರು.

ಕಾಂಗ್ರೆಸ್‌ನ ನಾರಾಯಣಸ್ವಾಮಿ ಮಧ್ಯದಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಚುನಾವಣಾ ವ್ಯವಸ್ಥೆಯನ್ನು ಹಾಳು ಮಾಡಿದ್ದೇ ಬಿಜೆಪಿಯವರು. ಬಳ್ಳಾರಿಯ ಗಣಿ ರೆಡ್ಡಿಗಳಿಗೆ ಚುನಾವಣೆ ಉಸ್ತುವಾರಿ ಕೊಟ್ಟು ಮತದಾರರನ್ನೇ ಖರೀದಿ ಮಾಡಿದಿರಿ. ಆಪರೇಷನ್ ಕಮಲದ ಮೂಲಕ ಸರಕಾರಗಳನ್ನೇ ಉರುಳಿಸಿದಿರಿ ಎಂದು ಟೀಕಿಸಿದರು.

ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಮಾತನಾಡಿ, ಬಿಜೆಪಿಯವರು ಕೋಟ್ಯಂತರ ರೂಪಾಯಿ ಹಣದ ಹೊಳೆ ಹರಿಸುವ ಮೂಲಕ ವ್ಯವಸ್ಥೆಯನ್ನೇ ಹಾಳು ಮಾಡಿದರು ಎಂದು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X