ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಣಬೆ ಬೇಸಾಯ ತರಬೇತಿ

ಮಂಗಳೂರು, ಮಾ.11: ರೈತರು ಕೃಷಿ ಜೊತೆಗೆ ಉಪ ಕಸುಬುಗಳನ್ನು ಮಾಡುವುದರ ಮೂಲಕ ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯಗಳಿಸ ಬಹುದು ಎಂದು ಕರ್ನಾಟಕ ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಜಯರಾಜ್ ಹೇಳಿದರು.
ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮದಡಿ ಅಣಬೆ ಕೃಷಿ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಈಶ್ವರ ಭಟ್ ಮಾತನಾಡಿ ಅಣಬೆಗಳು ಶಿಲೀಂದ್ರ ವರ್ಗಕ್ಕೆ ಸೇರಿದ ಸೂಕ್ಷ್ಮ ಜೀವಾಣುಗಳು. ಭಾರತದಲ್ಲಿ ಹಲವಾರು ವಿಧವಾದ ಅಣಬೆಗಳು ಸ್ವಾಭಾವಿಕವಾಗಿ ಬೆಳೆಯುತ್ತವೆ. ಅವುಗಳಲ್ಲಿ ಕೆಲವು ವಿಷಪೂರಿತವಾದವು ಮತ್ತು ಕೆಲವು ಅಣಬೆಗಳು ತಿನ್ನಲು ಯೋಗ್ಯವಾಗಿವೆ. ತಿನ್ನುವ ಅಣಬೆಗಳು ಇತರೆ ತರಕಾರಿಗಳಿಗೆ ಹೋಲಿಸಿದರೆ ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿರುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಡಾ.ಎನ್.ಚೇತನ್, ಡಾ. ಕೇದಾರನಾಥ್, ಡಾ. ಶೋಧನ್ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು.
Next Story





