Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ. 24ರಂದು ಬೆಳ್ತಂಗಡಿ ತಾಲೂಕು ಕನ್ನಡ...

ಮಾ. 24ರಂದು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ11 March 2020 8:23 PM IST
share

ಬೆಳ್ತಂಗಡಿ: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ 17ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಮಾ.24ದಂದು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ  ಪರಿಂಜೆಯ ಪಡ್ಯಾರಬೆಟ್ಟ ಸಂತೃಪ್ತಿ ಸಭಾಭವನದಲ್ಲಿ ನಡೆಯಲಿದೆ.

ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಜಿ.ರಾಮನಾಥ್ ಭಟ್ ವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ 12ಮಂದಿ ಸಾಧಕರಿಗೆ ಸನ್ಮಾನ ಹಾಗೂ ಇಬ್ಬರು ಉದಯೋನ್ಮುಖ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಬಿ ಯಶೋವರ್ಮ ತಿಳಿಸಿದ್ದಾರೆ.

ಹೊಸಂಗಡಿ ಗ್ರಾ.ಪಂ. ಅಧ್ಯಕ್ಷೆ ಹೇಮಾವಸಂತ್ ಅವರು ಬೆಳಗ್ಗೆ 9.15ಕ್ಕೆ ರಾಷ್ಟ್ರಧ್ವಜಾರೋಹಣ ಗೈಯುವರು. ದ.ಕ. ಜಿಲ್ಲೆ ಕ.ಸಾ.ಪ. ಅಧ್ಯಕ್ಷ ಎಸ್ ಪ್ರದೀಪ ಕುಮಾರ ಕಲ್ಕೂರ ಪರಿಷತ್ತು ಧ್ವಜ ಹಾಗೂ ಕ.ಸಾ.ಪ.ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಡಾ.ಬಿ.ಯಶೋವರ್ಮ ಸಮ್ಮೇಳನ ಧ್ವಜಾರೋಹಣ ಗೈಯುವರು. ಉದ್ಘಾಟನಾ ಸಮಾರಂಭ 9.30ಕ್ಕೆ ಸರಿಯಾಗಿ ಪ್ರಾರಂಭಗೊಂಡು 11.30ರೊಳಗೆ ಮುಕ್ತಾಯಗೊಳ್ಳಲಿದೆ. 

 ಸಮ್ಮೇಳನಾಧ್ಯಕ್ಷ ಜಿ ರಾಮನಾಥ ಭಟ್, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಮಚ್ಚಿನ ಹಾಗೂ  ಸಮ್ಮೇಳನ ಸಂಯೋಜನಾ ಸಮಿತಿಯ ಎ.ಜೀವಂಧರ ಕುಮಾರ ಪಡ್ಯೋಡಿಗುತ್ತು  ಉಪಸ್ಥಿತಿಯಲ್ಲಿ  ಶ್ರೀಕ್ಷೇತ್ರ ಧರ್ಮಸ್ಥಳದ ಹೇಮಾವತಿ ವೀ.ಹೆಗ್ಗಡೆ ಯವರು ಉದ್ಘಾಟಿಸಲಿದ್ದಾರೆ.  ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ `ಚಾರುಮುಡಿ' ಸ್ಮರಣ  ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷೆ ದಿವ್ಯಜ್ಯೋತಿ ಹಾಗೂ ಹೊಸಂಗಡಿ ತಾಲೂಕು ಪಂಚಾಯತ್ ಸದಸ್ಯ ಓಬಯ್ಯ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

ಸಮ್ಮೇಳನ ಸಂಯೋಜನಾ ಸಮಿತಿಯ ಕಾರ್ಯಾಧ್ಯಕ್ಷ ಪಿ.ಧರಣೀಂದ್ರ ಕುಮಾರ್ ಸ್ವಾಗತಿಸಲಿದ್ದು, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅವರು ಕಾರ್ಯಕ್ರಮದ ಆಶಯ ನುಡಿ ನುಡಿಯಲಿದ್ದಾರೆ.  ಬೆಳ್ತಂಗಡಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಬಿ.ಯಶೋವರ್ಮ ಪ್ರಾಸ್ತಾವಿಕ ಮಾತುಗಳನ್ನಾಡುವರು.

ಸನ್ಮಾನ ಮತ್ತು ಸಮಾರೋಪ ಸಮಾರಂಭ

ದ.ಕ.ಜಿಲ್ಲೆ ಕ.ಸಾ.ಪ. ಅಧ್ಯಕ್ಷ ಎಸ್ ಪ್ರದೀಪ ಕುಮಾರ ಕಲ್ಕೂರ  ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅವರು ಸನ್ಮಾನಿತರನ್ನು ಗೌರವಿಸಲಿದ್ದಾರೆ.

ಕಾಂತಾವರ ಕನ್ನಡ ಸಂಘ ಅಧ್ಯಕ್ಷ ಡಾ.ನಾ.ಮೊಗಸಾಲೆ ಸಮಾರೋಪ ಭಾಷಣ ಮಾಡಲಿದ್ದು, ಜಿ.ರಾಮನಾಥ ಭಟ್ ಸಮ್ಮೇಳನಾಧ್ಯಕ್ಷರ ನುಡಿ ನುಡಿಯುವರು. ಸಮ್ಮೇಳನ ಸಂಯೋಜನಾ ಸಮಿತಿ ಅಧ್ಯಕ್ಷ ಹಾಗೂ ಪರಿಂಜೆ ಗುತ್ತು ಪಿ.ಜಯರಾಮ ಕಂಬಳಿ ಸ್ವಾಗತಿಸಲಿದ್ದಾರೆ. 

ಸನ್ಮಾನಿತರು : ಪತ್ರಿಕೋದ್ಯಮ-  ದೇವಿಪ್ರಸಾದ್, ಜೈಕನ್ನಡಮ್ಮ ವಾರಪತ್ರಿಕೆ, ವೈದ್ಯಕೀಯ- ಬೆದ್ರಡ್ಕ ಡಾ.ರಾಮಕೃಷ್ಣ ಭಟ್, ಸಮಾಜಸೇವೆ-ಬಿ.ರಾಮಚಂದ್ರ ಶೆಟ್ಟಿ, ಶಿಕ್ಷಣ-ಬಜಿರೆ ಮುಖ್ಯ ಶಿಕ್ಷಕಿ ಎಂ.ಕಮಲಾಜಿ ಎಸ್ ಜೈನ್, ಯಕ್ಷಗಾನ-ನಿಡ್ಲೆ ಗೋವಿಂದ ಭಟ್, ಸಾಮಾಜಿಕ ಜಾಗೃತಿ-ತೋಟತ್ತಾಡಿ ಡಿ.ಎ.ರಹಿಮಾನ್, ಕಂಬಳ-ಅಳದಂಗಡಿ ರವಿ, ಜಾನಪದ-ಮರೋಡಿ ದೇವು, ಉದ್ಯಮ-ಪೆರಿಂಜೆ ಮದಕುಡೆ ಕೊರಗಪ್ಪ ಶೆಟ್ಟಿ, ಹೈನುಗಾರಿಕೆ-ಪೆರಿಂಜೆ ಜೆರೋಮಿ ಎಸ್.ಮೊರಾಸ್, ಕೃಷಿ-ಬಳಂಜ ಅನಿಲ್, ಸೇವೆ-ಉಜಿರೆ ಬದುಕು ಕಟ್ಟೋಣ ಬನ್ನಿ ಸಂಘಟನೆ, ಪ್ರತಿಭಾ ಪುರಸ್ಕಾರ-ಪೆರಿಂಜೆ ಪ್ರವೀಣ್ ಜೈನ್ ಹಾಗೂ ಗುಂಡೂರಿ ದಿವ್ಯ ಅಂಚನ್. ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಗೋಷ್ಠಿಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಡಾ.ಎಂ.ಪಿ.ಶ್ರೀನಾಥ್, ಸಮ್ಮೇಳನ ಸಂಯೋಜನ ಸಮಿತಿ ಕಾರ್ಯಾಧ್ಯಕ್ಷ ಪಿ.ದರಣೇಂದ್ರ ಕುಮಾರ್, ಅಧ್ಯಕ್ಷ ಪಿ.ಜಯರಾಜ್ ಕಂಬಳಿ, ಪ್ರ.ಕಾರ್ಯದರ್ಶಿ ವಿದ್ಯಾನಂದ ಜೈನ್, ಕೋಶಾಧಿಕಾರಿ ಎಚ್.ಆಲಿಯಬ್ಬ, ಪ್ರ.ಸಂಚಾಲಕ ಇಸ್ಮಾಯಿಲ್ ಕೆ., ಉಪಾಧ್ಯಕ್ಷೆ ಹೇಮಾವಸಂತ್, ಪ್ರಚಾರ ಸಮಿತಿಯ ಹರೀಶ್ ಆದೂರು, ಹೊಸಂಗಡಿ ಗ್ರಾಪಂ ಕಾರ್ಯದರ್ಶಿ ಜಯಲಕ್ಷ್ಮೀ, ಸೋಮಶೇಖರ ಶೆಟ್ಟಿ, ಜಿನೇಶ್ಚಂದ್ರ ಬಲ್ಲಾಳ್ ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X