ಗ್ರಾಮಲೆಕ್ಕಿಗರ ಮೇಲೆ ನಿಗಾ, ಕಚೇರಿಗಳಿಗೆ ಸಿಸಿಟಿವಿ ಕ್ಯಾಮರಾ: ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು, ಮಾ.11: ಗ್ರಾಮಲೆಕ್ಕಿಗರ ಕಾರ್ಯವೈಖರಿ ಮೇಲೆ ನಿಗಾವಹಿಸಲು ರಾಜ್ಯದ ಎಲ್ಲ ಗ್ರಾಮಲೆಕ್ಕಿಗರ ಕಚೇರಿಗಳಿಗೆ ಸಿಸಿಟಿವಿ ಕ್ಯಾಮರಾ ಅಳವಡಿಸಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಬುಧವಾರ ವಿಧಾನ ಪರಿಷತ್‌ನಲ್ಲಿ ಮಧ್ಯಾಹ್ನ ಭೋಜನ ನಂತರ ಆರಂಭವಾದ ಪ್ರಶ್ನೋತ್ತರ ವೇಳೆಯಲ್ಲಿ ಅವರು, ಗ್ರಾಮಲೆಕ್ಕಿಗರು, ಕಂದಾಯ ನಿರೀಕ್ಷಕರು ಕಚೇರಿಗಳಲ್ಲಿ ಇರುವುದಿಲ್ಲ. ಇದರಿಂದ ಜನರಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಹೀಗಾಗಿ ಗ್ರಾಮಲೆಕ್ಕಿಗರ ಕಾರ್ಯವೈಖರಿ ಮೇಲೆ ನಿಗಾ ವಹಿಸಲು ಕಚೇರಿಯಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು ಎಂದರು.
ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಳಿತು ಮೇಲ್ವಿಚಾರಣೆ ನಡೆಸುವ ವ್ಯವಸ್ಥೆ ಕಲ್ಪಿಸಲಾಗುವುದು. 8 ತಾಸು ಗ್ರಾಮಲೆಕ್ಕಿಗರು ಕಚೇರಿಯಲ್ಲಿ ಕುಳಿತು ಕೆಲಸ ಮಾಡಬೇಕು ಎಂಬುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.
Next Story





