ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆ: ಡಿ.ಕೆ. ಶಿವಕುಮಾರ್‌ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಭಿನಂದನೆ
ಉಡುಪಿ, ಮಾ.11: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ.ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾಗಿ ನೇಮಕ ಗೊಂಡಿರುವ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹಮ್ಮದ್ ಇವರ ನೇಮಕವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸ್ವಾಗತಿಸಿದೆ.
ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಡಿ.ಕೆ.ಶಿ.ಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠಗೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಪ್ರತಿಕ್ರಿಯಿಸಿದ್ದಾರೆ.
Next Story





