ರೇವಣ್ಣ ಇದ್ದರೆ ಸಮಸ್ಯೆಯೇ ಇರುವುದಿಲ್ಲ: ಸಚಿವ ಶ್ರೀರಾಮುಲು

ಬೆಂಗಳೂರು, ಮಾ. 12: ‘ರೇವಣ್ಣ ಎಲ್ಲಿ ಇರುತ್ತಾರೋ ಅಲ್ಲಿ ಸಾಮಾನ್ಯವಾಗಿ ಯಾವುದೇ ಸಮಸ್ಯೆ ಇರುವುದಿಲ್ಲ’ ಎಂದು ಆರೋಗ್ಯ ಇಲಾಖೆ ಸಚಿವ ಶ್ರೀರಾಮುಲು ಅವರು, ಜೆಡಿಎಸ್‌ನ ಹಿರಿಯ ಸದಸ್ಯ ಎಚ್.ಡಿ.ರೇವಣ್ಣನವರ ಕಾಲೆಳೆದ ಪ್ರಸಂಗ ನಡೆಯಿತು.
ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ರೇವಣ್ಣ ಕೇಳಿದ ಪ್ರಶ್ನೆಗೆ ಉತ್ತರ ನೀಡುವ ವೇಳೆ ಹೊಳೆನರಸೀಪುರ ಪಟ್ಟಣದ ಆಸ್ಪತ್ರೆಯಲ್ಲಿ 26 ತಜ್ಞ ವೈದ್ಯರ ಪೈಕಿ 23 ತಜ್ಞರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ರೇವಣ್ಣ ಇದ್ದರೆ ಸಮಸ್ಯೆ ಇರುವುದಿಲ್ಲ ಎಂದು ಕಿಚಾಯಿಸಿದರು.
ಇಬ್ಬರು ತಜ್ಞ ವೈದ್ಯರು, 1 ಆಡಳಿತ ಶಸ್ತ್ರಚಿಕಿತ್ಸಕ ಹುದ್ದೆಯನ್ನು ಶೀಘ್ರವೇ ಭರ್ತಿ ಮಾಡಲಾಗುವುದು. ಅಲ್ಲದೆ, ಖಾಲಿಯಿರುವ 62 ಗ್ರೂಪ್ ‘ಡಿ’ ನೌಕರರ ಹುದ್ದೆಗಳನ್ನು ನೇಮಕ ಮಾಡಲಾಗುವುದು ಎಂದ ಅವರು, ರೋಗಿಗಳು ಮತ್ತು ಜನರಿಗೆ ತೊಂದರೆ ಆಗದಂತೆ ಗುತ್ತಿಗೆ ನೌಕರರ ಮೂಲಕ ಸ್ವಚ್ಛತಾ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.
Next Story





