Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದೇಶದಿಂದ ಬಂದವರು ಸ್ವಯಂ ಘೋಷಣೆ...

ವಿದೇಶದಿಂದ ಬಂದವರು ಸ್ವಯಂ ಘೋಷಣೆ ಮಾಡಿಕೊಳ್ಳಿ: ಡಿಎಚ್‌ಓ

ಕೊರೋನ ಮುನ್ನೆಚ್ಚರಿಕೆ ಸಭೆ

ವಾರ್ತಾಭಾರತಿವಾರ್ತಾಭಾರತಿ12 March 2020 8:22 PM IST
share
ವಿದೇಶದಿಂದ ಬಂದವರು ಸ್ವಯಂ ಘೋಷಣೆ ಮಾಡಿಕೊಳ್ಳಿ: ಡಿಎಚ್‌ಓ

ಉಡುಪಿ, ಮಾ.12: ಜಿಲ್ಲೆಗೆ ವಿದೇಶದಿಂದ ಬಂದ ವ್ಯಕ್ತಿಗಳು, ಆರೋಗ್ಯ ಇಲಾಖೆಯ ಸ್ಥಳೀಯ ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರ ಬಳಿ, ತಾವು ವಿದೇಶದಿಂದ ಬಂದಿರುವ ಬಗ್ಗೆ ಸ್ವಯಂ ಘೋಷಣೆ ಮಾಡಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಕೊರೋನ ನಿಯಂತ್ರಣ ಕುರಿತ ಕಾರ್ಯದಲ್ಲಿ ಇಲಾಖೆಯೊಂದಿಗೆ ಕೈಜೋಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ಮನವಿ ಮಾಡಿದ್ದಾರೆ.

ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ನಡೆದ ಕೊರೋನ ಮುನ್ನೆಚ್ಚರಿಕೆ ಸಭೆಯಲ್ಲಿ ಅವರು ಮಾತನಾಡು ತಿದ್ದರು.

ಜಿಲ್ಲೆಯಲ್ಲಿ ಫೆ.25ರ ಬಳಿಕ ವಿದೇಶಗಳಿಂದ ಆಗಮಿಸಿರುವ ಸಾರ್ವಜನಿಕರು ಸ್ವಯಂಘೋಷಣೆ ಮಾಡಿಕೊಳ್ಳುವಂತೆ ಹಾಗೂ ಸಾರ್ವಜನಿಕರು ವಿದೇಶಗಳಿಂದ ಬಂದ ವ್ಯಕ್ತಿಗಳ ಬಗ್ಗೆ ಮಾಹಿತಿಯಿದ್ದಲ್ಲಿ ಆರೋಗ್ಯ ಇಲಾಖೆಗೆ ತಿಳಿಸುವ ಮೂಲಕ ಕೊರೋನ ನಿಯಂತ್ರಿಸಲು ಜಿಲ್ಲಾಡಳಿತ ದೊಂದಿಗೆ ಸಹಕರಿಸುವಂತೆ ಹೇಳಿದ ಅವರು, ಮಾಹಿತಿ ನೀಡಿದವರ ಹಾಗೂ ಶಂಕಿತ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.

ವಿದೇಶಗಳಿಗೆ ಭೇಟಿ ನೀಡಿ ವಾಪಾಸಾದವರು 14 ದಿನಗಳವರೆಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ, ಮನೆಯಲ್ಲಿಯೆ ಪ್ರತ್ಯೇಕವಾಗಿದ್ದು, ರೋಗದ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು. ಕೊರೋನ ಸೋಂಕಿನ ಸ್ಯಾಂಪಲ್ ಪರೀಕ್ಷೆಗಾಗಿ ಈಗಾಗಲೇ ಬೆಂಗಳೂರಿನಲ್ಲಿ ರುವ 2 ಲ್ಯಾಬ್‌ಗಳ ಜೊತೆಗೆ ಹೊಸದಾಗಿ ಶಿವಮೊಗ್ಗ, ಮೈಸೂರು ಮತ್ತು ಹಾಸನದಲ್ಲಿ ತಲಾ ಒಂದು ಪ್ರಯೋಗಾಲಯ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಕೊರೋನ ಬಗ್ಗೆ ಸುಳ್ಳು ಸುದ್ದಿ ಅಥವಾ ವದಂತಿಗಳನ್ನು ಹರಡಬಾರದು. ಇಂತಹ ಸುದ್ದಿಗಳನ್ನು ಹರಡುವವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು. ಕೊರೋನ ಶಂಕಿತ ವ್ಯಕ್ತಿಯ ಗುರುತು, ವಿಳಾಸ ಅಥವಾ ಇನ್ನಿತರ ವೈಯಕ್ತಿಕ ಮಾಹಿತಿಯನ್ನು ಸಹ ಮಾದ್ಯಮದಲ್ಲಿ ಬಹಿರಂಗಪಡಿಸದಂತೆ ಡಿಹೆಚ್‌ಓ ತಿಳಿಸಿದರು.

ವಿದೇಶದಿಂದ ಬಂದ ವ್ಯಕ್ತಿಗಳಲ್ಲಿ ತೀವ್ರ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ಸಮಸ್ಯೆಯಿದ್ದಲ್ಲಿ ಜಿಲ್ಲಾ ಸರ್ವೇಕ್ಷಣಾ ಘಟಕದ ದೂ.ಸಂ. 0820-2525561 ಗೆ ಮಾಹಿತಿ ನೀಡುವಂತೆ ಹಾಗೂ ಈ ಕುರಿತು ವೈದ್ಯಕೀಯ ಪರೀಕ್ಷೆಗೆ ಆಗಮಿಸುವಾಗ ಖಾಸಗಿ ವಾಹನ ಅಥವಾ ಬಸ್ ಮುಂತಾದ ಸಾರ್ವಜನಿಕ ವಾಹನ ಬಳಸದಂತೆ ತಿಳಿಸಿದ ಡಾ. ಸೂಡಾ, ಅರೋಗ್ಯ ಇಲಾಖೆಯಲ್ಲಿ ಇದಕ್ಕಾಗಿಯೇ ಪ್ರತ್ಯೇಕ ಸುಸಜ್ಜಿತ ವಾಹನವಿದ್ದು, ಆ ವಾಹನವನ್ನು ಶಂಕಿತರ ಮನೆಗೆ ಕಳುಹಿಸಿ, ಅದೇ ವಾಹನದಲ್ಲಿ ಕರೆ ತಂದು ಅಗತ್ಯ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಕೊರೋನ (ಕೋವಿಡ್-19) ಪ್ರಕರಣ ಪತ್ತೆಯಾಗಿಲ್ಲ. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ದಾಖಲಾಗಿರುವ ಸಾಗರ ತಾಲೂಕಿನ ಮಹಿಳೆಯಲ್ಲಿ ಕೊರೋನ ರೋಗದ ಸೋಂಕು ಇಲ್ಲ ಎಂದು ಶಿವಮೊಗ್ಗದಲ್ಲಿ ನಡೆಸಿದ ವೈದ್ಯಕೀಯ ಪರೀಕ್ಷೆಯ ವರದಿ ಬಂದಿದ್ದು, ಈ ಮಹಿಳೆ ವಯೋಸಹಜ ಇತರೆ ಆರೋಗ್ಯ ಸಮಸ್ಯೆಗಳಿಂದ ದಾಖಲಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾ ಆಶ್ರಿತ ರೋಗವಾಹಕ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್, ಆರ್.ಸಿ.ಎಚ್ ಅಧಿಕಾರಿ ಡಾ. ಎಂ.ಜಿ.ರಾಮ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಸತೀಶ್ ರಾವ್, ಜಿಲ್ಲಾ ಕೊರೋನ ನಿಯಂತ್ರಣ ಕಾರ್ಯಪಡೆಯ ಸದಸ್ಯರಾದ ಡಾ. ತೇಜಸ್ವಿನಿ, ಪ್ರೀತಮ್, ಗಿರೀಶ್ ಕಡ್ಡೀಪುಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X