ಸಾಲಿಹಾತ್ ಕಾಲೇಜು ವಿದ್ಯಾರ್ಥಿಗಳಿಂದ ಪೊಲೀಸ್ ಠಾಣೆ ಭೇಟಿ

ಮಲ್ಪೆ, ಮಾ.12: ತೋನ್ಸೆ ಹೂಡೆಯ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಪೊಲೀಸ್ ಇಲಾಖೆಯ ತೆರೆದ ಮನೆ ಕಾರ್ಯಕ್ರಮದಡಿ ಇತ್ತೀಚೆಗೆ ಮಲ್ಪೆ ಪೊಲೀಸ್ ಠಾಣೆಗೆ ಭೇಟಿ ನೀಡಿದರು.
ಮಲ್ಪೆ ಪೊಲೀಸ್ ಠಾಣಾಧಿಕಾರಿ ತಿಮ್ಮೇಶ್, ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಕಾನೂನುಗಳ ಕುರಿತು ವಿವರ ನೀಡಿದರು. ವಿದ್ಯಾರ್ಥಿ ಗಳು ಪೊಲೀಸ್ ಠಾಣೆಯಲ್ಲಿರುವ ವಿವಿಧ ಕೊಠಡಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಪೊಲೀಸ್ ಇಲಾಖೆಯ ಕಾರ್ಯ ನಿರ್ವಹಣೆ ಕುರಿತ ವಿದ್ಯಾರ್ಥಿಗಳ ಪ್ರಶ್ನೆಗೆ ಠಾಣಾಧಿಕಾರಿ ಉತ್ತರ ನೀಡಿದರು.
ಕಾಲೇಜಿನ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ, ಪ್ರಾಂಶುಪಾಲೆ ಡಾ.ಶಬೀನಾ ಹಾವೇರಿಪೇಟ್, ಅರೇಬಿಕ್ ಕಾಲೇಜಿನ ಪ್ರಾಂಶುಪಾಲೆ ಕುಲ್ಸುಮ್ ಅಬೂಬಕರ್ ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು
Next Story





