ಹಿರಿಯ ಪತ್ರಕರ್ತ ಮಾ.ನ.ವಿಜಯೇಂದ್ರ ನಿಧನ

ಬೆಂಗಳೂರು, ಮಾ.12: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಮಾ.ನ.ವಿಜಯೇಂದ್ರ ಅವರು ಬುಧವಾರ ತಡರಾತ್ರಿ ಸಾವನ್ನಪ್ಪಿದ್ದಾರೆ.
ಮೂಲತಃ ಕೋಲಾರ ಜಿಲ್ಲೆಯವರಾಗಿದ್ದ ಅವರು ರಾಜಧಾನಿಯಲ್ಲಿ ಸಂಜೆ ಪತ್ರಿಕೆಯೊಂದರಲ್ಲಿ ವೃತ್ತಿ ಜೀವನ ಆರಂಭಿಸಿ ಟೈಮ್ಸ್ ಆಫ್ ಇಂಡಿಯಾ, ಡೆಕ್ಕನ್ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ.
ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರ ಮಾಧ್ಯಮ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ, ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕರ ಬಳಿ ಮಾಧ್ಯಮ ಸಲಹೆಗಾರರಾಗಿ ಕೆಲಸ ಮಾಡಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Next Story





