Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ನಿಯಂತ್ರಿಸುವಲ್ಲಿ ರಾಜ್ಯ ಸರಕಾರ...

ಕೊರೋನ ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ವಿಫಲ: ಮಾಜಿ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ13 March 2020 5:34 PM IST
share
ಕೊರೋನ ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ವಿಫಲ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾ.13: ದೇಶದಲ್ಲಿಯೇ ಮೊದಲ ಬಾರಿಗೆ ಕೊರೋನ ವೈರಸ್‌ನಿಂದ ರಾಜ್ಯದಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವುದು ದುರಂತ ಸಂಗತಿಯಾಗಿದ್ದು, ಇದಕ್ಕೆ ರಾಜ್ಯ ಸರಕಾರದ ವೈಫಲ್ಯವೇ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ವಿಧಾನಸಭೆಯಲ್ಲಿ ನಡೆದ ಶೂನ್ಯ ವೇಳೆ ಚರ್ಚೆಯಲ್ಲಿ ಅವರು, ಕರ್ನಾಟಕದಲ್ಲಿ ಕೊರೋನ ವೈರಸ್ ಭೀತಿ ಹೆಚ್ಚಾಗುತ್ತಿದೆ. ಇದುವರೆಗೂ 5 ಜನರಲ್ಲಿ ಕೊರೋನ ಸೊಂಕು ಪತ್ತೆಯಾಗಿದ್ದು, ಕೊರೋನ ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಮತ್ತು ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ದೂರಿದರು.

ಇಡೀ ದೇಶದಲ್ಲೇ ಕೊರೋನ ರೋಗಕ್ಕೆ ಮೊದಲು ಬಲಿಯಾಗಿದ್ದು, ಕಲಬುರಗಿಯವರು ಎಂಬುದು ದುಃಖಕರ. ಮೃತ ಸಿದ್ದೀಕಿ ಅವರಿಗೆ ಚಿಕಿತ್ಸೆ ನೀಡಲು ಹೈದರಾಬಾದ್‌ನ ಹಲವು ಆಸ್ಪತ್ರೆಗಳು ತಿರಸ್ಕರಿಸಿದವು. ಚಿಕಿತ್ಸೆಗಾಗಿ ಐದಾರು ಆಸ್ಪತ್ರೆಗಳಿಗೆ ಅವರನ್ನು ಕರೆದುಕೊಂಡು ಅಲೆದಾಡಬೇಕಾಯ್ತು. ಈ ವಿಳಂಬದಿಂದಾಗಿ ಅವರ ಪ್ರಾಣಹಾನಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕೊರೋನ ಸೋಂಕು ಕಾಣಿಸಿಕೊಂಡು ವಾರ ಕಳೆದಿದೆ. ಒಬ್ಬರು ಮೃತಪಟ್ಟು, ಐವರಿಗೆ ರೋಗ ದೃಢಪಟ್ಟಿದೆ. ರಕ್ತ ಮಾದರಿ ಪರೀಕ್ಷೆಗೆ ರಾಜ್ಯದಲ್ಲಿರುವುದೇ 5 ಪ್ರಯೋಗಾಲಯಗಳು, ಜಿಲ್ಲಾ ಕೇಂದ್ರಗಳಲ್ಲಿ ಪ್ರಯೋಗಾಲಯ ವ್ಯವಸ್ಥೆ ಇಲ್ಲ. ಅದೇ ರೀತಿ, ವಿಮಾನ ನಿಲ್ದಾಣವಿರುವ ಜಿಲ್ಲಾ ಕೇಂದ್ರಗಳಲ್ಲಿಯೂ ಇಲ್ಲ. ಜೀವನ್ಮರಣದ ಪ್ರಶ್ನೆಯಾಗಿರುವ ಕೊರೋನ ವಿಚಾರದಲ್ಲಿ ಅಸಡ್ಡೆ ಬೇಡ ಎಂದರು.

ಮಾರಕ ರೋಗದ ಬಗ್ಗೆ ಭಯದ ವಾತಾವರಣ ಇರುವಾಗ ಸರಕಾರ ಜನರಿಗೆ ಪುಕ್ಕಟೆ ಸಲಹೆ-ಎಚ್ಚರಿಕೆ ನೀಡಿ ಸಮಯ ವ್ಯರ್ಥ ಮಾಡಬಾರದು. ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಿ, ಸರಕಾರ ನಮ್ಮೊಂದಿಗಿದೆ ಎಂದು ಜನರಲ್ಲಿ ವಿಶ್ವಾಸ ಮೂಡಿಸುವಂತಹ ಕಾರ್ಯ ತುರ್ತಾಗಿ ಆಗಬೇಕು. ಇದು ರಾಜಕೀಯ ಆರೋಪವಲ್ಲ, ವೈಯಕ್ತಿಕ ಸಲಹೆ ಎಂದು ಪರಿಗಣಿಸಿ ಜನರ ಜೀವ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸಿದ್ದರಾಮಯ್ಯ ನುಡಿದರು.

‘ಮನೆ ಮನೆಗೆ ತೆರಳಿ, ಜಿಲ್ಲಾ ಕೇಂದ್ರ ಸ್ಥಾಪಿಸಿ’

ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ರಕ್ತ ಮಾದರಿ ಪರೀಕ್ಷೆಗೆ ಪ್ರಯೋಗಾಲಯ ತೆರೆಯಲು ಸರಕಾರ ತಕ್ಷಣ ಕ್ರಮಕೈಗೊಳ್ಳಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಜನರ ಆರೋಗ್ಯದ ಮಾಹಿತಿ ಪಡೆಯಬೇಕು.

-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X