ಕಮಲಶಿಲೆ ಗ್ರಾಮ ಸೇರ್ಪಡೆ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಉಡುಪಿ, ಮಾ.13: ಜಿಲ್ಲೆಯಲ್ಲಿ ಹೊಸ ತಾಲೂಕು ರಚನೆಯಿಂದಾಗಿ ಹಳ್ಳಿ ಹೊಳೆ ಗಾಪಂ ವ್ಯಾಪ್ತಿಯಲ್ಲಿ ಬರುವ ಕಮಲಶಿಲೆ ಗ್ರಾಮವನ್ನು ಕುಂದಾಪುರ ತಾಲೂಕಿನ ಆರ್ಜಿ ಗ್ರಾಪಂಗೆ ಸೇರ್ಪಡೆಗೊಳಿಸುವ ಬಗ್ಗೆ ಸರಕಾರದ ಪತ್ರದಲ್ಲಿ ಅನುಮೋದನೆ ನೀಡಲಾಗಿದೆ.
ಅದರಂತೆ ಕಮಲಶಿಲೆ ಗ್ರಾಮವನ್ನು ಆರ್ಜಿ ಗ್ರಾಪಂಗೆ ಸೇರ್ಪಡೆಗೊಳಿಸುವ ಬಗ್ಗೆ ಕರಡು ಅಧಿಸೂಚನೆಯನ್ನು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ 1993ರ ಪ್ರಕರಣ 4ರಂತೆ ಹೊರಡಿಸ ಲಾಗಿದೆ. ಈ ಅಧಿಸೂಚನೆ ಪ್ರಕಟಿಸಿದ 30 ದಿನಗಳ ಒಳಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





