ಭ್ರಷ್ಟಾಚಾರಗಳ ಕುರಿತು ತನಿಖೆ ನಡೆಸಿ: ಕೆಎಸ್ ಅಂಡ್ ಡಿಎಲ್ ಎಂಪ್ಲಾಯಿಸ್ ಯೂನಿಯನ್
ಬೆಂಗಳೂರು, ಮಾ.13: ಕರ್ನಾಟಕ ಸುಗಂಧ ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಯಲ್ಲಿ ನಡೆದಿರುವ ಮತ್ತು ನಡೆಯುತ್ತಿರುವ ಭ್ರಷ್ಟಾಚಾರಗಳ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಎಸ್ ಅಂಡ್ ಡಿಎಲ್ ಎಂಪ್ಲಾಯಿಸ್ ಯೂನಿಯನ್ ಆಗ್ರಹಿಸಿದೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಯೂನಿಯನ್‌ನ ಅಧ್ಯಕ್ಷ ಜಿ.ಆರ್.ಶಿವಶಂಕರ್ ಮಾತನಾಡಿ, ಕಾರ್ಖಾನೆಯಲ್ಲಿ ಅನೇಕ ಮಂದಿ ಅಧಿಕಾರಿಗಳು ತೊಡಗಿಸಿಕೊಂಡು ಭ್ರಷ್ಟಚಾರ ನಡೆಯುತ್ತಿದ್ದಾರೆ. ಜೊತೆಗೆ ನೂರಾರು ಕಾರ್ಮಿಕರಿಗೆ ವೇತನ, ರಜೆಗಳು, ತುಟ್ಟಿಭತ್ಯೆ ಸೇರಿದಂತೆ ಮುಂತಾದ ಸವಲತ್ತುಗಳನ್ನು ಕೊಡದೆ ಹಿಂಸೆಯನ್ನು ನೀಡುತ್ತಿದ್ದಾರೆ ಎಂದು ಆರೋಪಿದರು.
ರಾಜ್ಯದ ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸಬೇಕು. ಗುತ್ತಿಗೆ ಕಾರ್ಮಿಕರಿಗೆ ಕಾನೂನಿನ ಪ್ರಕಾರ ನೀಡಬೇಕಿರುವ ಕನಿಷ್ಠ ವೇತನ, ಭತ್ಯೆ, ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ವೇತನ, ಬೋನಸ್ ಸೌಲಭ್ಯ ನೀಡಬೇಕೆಂದು ಅವರು ಆಗ್ರಹಿಸಿದರು.
Next Story





