ಕೊರೋನ ವೈರಸ್ ನಿಯಂತ್ರಣಕ್ಕೆ ಬರುವವರೆಗೂ ಆರೋಗ್ಯ ಇಲಾಖೆ ಸಿಬ್ಬಂದಿಗೆ ರಜೆ ಇಲ್ಲ

ಸಾಂದರ್ಭಿಕ ಚಿತ್ರ
ಬೆಂಗಳೂರು, ಮಾ. 13: ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ನಾಳೆ (ಮಾ.14 ಮತ್ತು 15) ಎರಡನೆ ಶನಿವಾರ ಮತ್ತು ರವಿವಾರವೂ ಸೇರಿದಂತೆ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ರಜೆ ಮಂಜೂರು ಮಾಡದಂತೆ ಸುತ್ತೋಲೆ ಹೊರಡಿಸಲಾಗಿದೆ.
ಹೆರಿಗೆ ಆಸ್ಪತ್ರೆಗಳು, ನಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು, ಕಚೇರಿ ಸಿಬ್ಬಂದಿಗಳು, ಅರೆ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಎಲ್ಲ ಖಾಯಂ ಮತ್ತು ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ರಜೆ ಇಲ್ಲ.
ಪರಿಸ್ಥಿತಿ ಸುಧಾರಿಸುವವರೆಗೂ ಆಸ್ಪತ್ರೆಯ ಕಚೇರಿ ಮುಖ್ಯಸ್ಥರು ಈಗಾಗಲೇ ರಜೆಯ ಮೇಲೆ ತೆರಳಿರುವವರನ್ನು ಕೂಡಲೇ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.
Next Story





