Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನವೈರಸ್ ‘ಅಧಿಸೂಚಿತ ವಿಪತ್ತು’ ಎಂದು...

ಕೊರೋನವೈರಸ್ ‘ಅಧಿಸೂಚಿತ ವಿಪತ್ತು’ ಎಂದು ಘೋಷಿಸಿದ ಭಾರತ

ಮೃತರ ಕುಟುಂಬಕ್ಕೆ ನಾಲ್ಕು ಲಕ್ಷ ರೂ.ಪರಿಹಾರ

ವಾರ್ತಾಭಾರತಿವಾರ್ತಾಭಾರತಿ14 March 2020 8:20 PM IST
share
ಕೊರೋನವೈರಸ್ ‘ಅಧಿಸೂಚಿತ ವಿಪತ್ತು’ ಎಂದು ಘೋಷಿಸಿದ ಭಾರತ

ಹೊಸದಿಲ್ಲಿ,ಮಾ.14: ದೇಶದಲ್ಲಿ ಕೊರೋನವೈರಸ್ ಪಿಡುಗನ್ನು ‘ಅಧಿಸೂಚಿತ ವಿಪತ್ತು ’ಎಂದು ಘೋಷಿಸಿರುವ ಕೇಂದ್ರ ಸರಕಾರವು ಇದು ಸೋಂಕುಪೀಡಿತ ವ್ಯಕ್ತಿಗಳಿಗೆ ಮತ್ತು ಸೋಂಕಿನಿಂದಾಗಿ ಮೃತರ ಕುಟುಂಬಗಳಿಗೆ ಪರಿಹಾರ ಮತ್ತು ನೆರವನ್ನು ಒದಗಿಸುವ ‘ವಿಶೇಷ ಒಂದು ಬಾರಿಯ ವ್ಯವಸ್ಥೆ ’ಯಾಗಿದೆ ಎಂದು ತಿಳಿಸಿದೆ.

ಕೊರೋನವೈರಸ್ ಸೋಂಕಿನಿಂದ ಮೃತರ ಕುಟುಂಬಗಳಿಗೆ ನಾಲ್ಕು ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು. ಚಿಕಿತ್ಸೆ ಪಡೆಯುತ್ತಿರುವ ಸೋಂಕುಪೀಡಿತರ ಆಸ್ಪತ್ರೆ ವೆಚ್ಚವನ್ನು ರಾಜ್ಯ ಸರಕಾರಗಳು ನಿಗದಿಗೊಳಿಸಿವೆ ಎಂದು ಗೃಹ ಸಚಿವಾಲಯವು ತನ್ನ ಪತ್ರದಲ್ಲಿ ತಿಳಿಸಿದೆ.

ಪ್ರತ್ಯೇಕ ನಿಗಾ ಶಿಬಿರಗಳಲ್ಲಿರುವ ರೋಗಿಗಳು ಮತ್ತು ಜನರಿಗೆ ತಾತ್ಕಾಲಿಕ ವಸತಿ ಹಾಗೂ ಆಹಾರ,ನೀರು,ಬಟ್ಟೆ ಮತ್ತು ವೈದ್ಯಕೀಯ ನೆರವು ಒದಗಿಸುವುದು ಸರಕಾರವು ವಿವರಿಸಿರುವ ಕ್ರಮಗಳಲ್ಲಿ ಸೇರಿವೆ.

  ಹೆಚ್ಚುವರಿ ಪರೀಕ್ಷಾ ಕೇಂದ್ರಗಳು, ಪೊಲೀಸರು, ಆರೋಗ್ಯ ರಕ್ಷಣೆ ಮತ್ತು ಮುನ್ಸಿಪಲ್ ಅಧಿಕಾರಿಗಳಿಗೆ ರಕ್ಷಣಾ ಉಪಕರಣಗಳು, ಸರಕಾರಿ ಆಸ್ಪತ್ರೆಗಳಿಗೆ ಥರ್ಮಲ್ ಸ್ಕಾನರ್‌ಗಳು ಮತ್ತು ಇತರ ಅಗತ್ಯ ಉಪಕರಣಗಳ ವೆಚ್ಚವನ್ನು ಪಾವತಿಸಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ ಹಣವನ್ನು ಬಳಸಿಕೊಳ್ಳಲಾಗುವುದು. ಇದಕ್ಕಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯನ್ನು ಬಳಸಲಾಗುವುದಿಲ್ಲ. ಉಪಕರಣಗಳ ಒಟ್ಟು ವೆಚ್ಚ ನಿಧಿಯ ವಾರ್ಷಿಕ ಹಂಚಿಕೆಯ ಶೇ.10ನ್ನು ಮೀರುವಂತಿಲ್ಲ ಎಂದು ಸರಕಾರವು ತಿಳಿಸಿದೆ.

ಭಾರತದಲ್ಲಿ ಈವರೆಗೆ 80ಕ್ಕೂ ಅಧಿಕ ಕೊರೋನವೈರಸ್ ಪ್ರಕರಣಗಳು ದೃಢಪಟ್ಟಿವೆ. ಸೋಂಕಿಗೊಳಗಾಗಿದ್ದ ಕರ್ನಾಟಕದ ಕಲಬುರಗಿಯ ವೃದ್ಧರೋರ್ವರು ಗುರುವಾರ ಮತ್ತು ದಿಲ್ಲಿಯ ವೃದ್ಧೆಯೋರ್ವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ಕೊರೋನವೈರಸ್ ಬಗ್ಗೆ ಮುಂಜಾಗ್ರತೆ ವಹಿಸಿರುವ ಕರ್ನಾಟಕ, ಮಹಾರಾಷ್ಟ್ರ, ಕೇರಳ, ದಿಲ್ಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸಾರ್ವಜನಿಕ ಸ್ಥಳಗಳು, ಶಾಲಾ ಕಾಲೇಜುಗಳು ಇತ್ಯಾದಿಗಳನ್ನು ಈಗಾಗಲೇ ಮುಚ್ಚಲಾಗಿದ್ದು, ಭಾರೀ ಪ್ರಮಾಣದಲ್ಲಿ ಸಮಾವೇಶಗಳನ್ನು ನಿಷೇಧಿಸಲಾಗಿದೆ. ಶನಿವಾರ ಪಶ್ಚಿಮ ಬಂಗಾಳ ಮತ್ತು ಗೋವಾ ರಾಜ್ಯಗಳೂ ಇಂತಹುದೇ ಕ್ರಮಗಳನ್ನು ಪ್ರಕಟಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X