Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಂತಿಯುತ ಬದುಕಿಗೆ ಸಮಾಜದ ಸ್ವಾಸ್ಥ್ಯ...

ಶಾಂತಿಯುತ ಬದುಕಿಗೆ ಸಮಾಜದ ಸ್ವಾಸ್ಥ್ಯ ಮುಖ್ಯ: ನ್ಯಾ.ನಝೀರ್

ಉಡುಪಿ ಜಿಲ್ಲಾ ಹೊಸ ಪೋಕ್ಸೋ ನ್ಯಾಯಾಲಯ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ14 March 2020 8:38 PM IST
share
ಶಾಂತಿಯುತ ಬದುಕಿಗೆ ಸಮಾಜದ ಸ್ವಾಸ್ಥ್ಯ ಮುಖ್ಯ: ನ್ಯಾ.ನಝೀರ್

ಉಡುಪಿ, ಮಾ.14: ನ್ಯಾಯಾಲಯಗಳು ಜನರಿಗಾಗಿಯೇ ಹೊರತು ಜನರು ನ್ಯಾಯಾಲಯಕ್ಕೆ ಅಲ್ಲ. ಹೀಗಾಗಿ ನ್ಯಾಯಾಲಯದಲ್ಲಿ ಹೆಚ್ಚು ಹೆಚ್ಚು ದಾವೆಗಳು ದಾಖಲಾಗುವಂತೆ ಅವಕಾಶ ಮಾಡಿಕೊಡಬಾರದು. ದಾವೆಗಳು ಹೆಚ್ಚಾದರೆ ಆ ಸಮಾಜದ ಸ್ವಾಸ್ಥ್ಯ ಹಾಳಾಗಿದೆ ಎಂದು ಅರ್ಥ. ಶಾಂತಿಯುತ ವಾಗಿ ಬದುಕಲು ಸಮಾಜದ ಸ್ವಾಸ್ಥ್ಯ ಬಹಳ ಮುಖ್ಯ. ಈ ನಿಟ್ಟಿನಲ್ಲಿ ವಕೀಲರು ಜನರಿಗೆ ಸರಿಯಾದ ಕಾನೂನು ಸಲಹೆಗಳನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಎಸ್.ಅಬ್ದುಲ್ ನಝೀರ್ ಹೇಳಿದ್ದಾರೆ.

ಉಡುಪಿ ನ್ಯಾಯಾಲಯ ಸಂಕೀರ್ಣದಲ್ಲಿ ನೂತನವಾಗಿ ಆರಂಭಿಸಲಾದ ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ- ಎಫ್‌ಟಿಎಸ್‌ಸಿ (ಪೋಕ್ಸೋ ನ್ಯಾಯಾಲಯ)ಯನ್ನು ಶನಿವಾರ ಉದ್ಘಾಟಿಸಿ ಅವರು ಮಾತಾಡುತಿದ್ದರು.

ಪೋಕ್ಸೊ ನ್ಯಾಯಾಲಯಕ್ಕೆ ಬರುವ ಪ್ರಕರಣಗಳು ಉತ್ತಮ ಸಮಾಜದಲ್ಲಿ ಒಳ್ಳೆಯ ಬೆಳವಣಿಗೆಯಲ್ಲ. ಆದರೆ ಆ ಪಿಡುಗನ್ನು ನಿವಾರಿಸಲು ಹಾಗೂ ಕಾನೂನು ಪ್ರಕಾರ ಸಂತ್ರಸ್ತರಿಗೆ ನ್ಯಾಯ ದೊರಕಿಸಿ ಕೊಡಲು ಪೋಕ್ಸೋ ನ್ಯಾಯಾಲಯ ಅಗತ್ಯವಾಗಿೆ ಎಂದು ಅವರು ಅಭಿಪ್ರಾಯ ಪಟ್ಟರು.

ಕರ್ನಾಟಕದಲ್ಲಿ ಕ್ರಿಮಿನಲ್‌ಗಿಂತ ಸಿವಿಲ್ ಪ್ರಕರಣಗಳೇ ಅಧಿಕವಾಗಿರುವುದ ರಿಂದ ನಮ್ಮ ಸಮಾಜದ ಸ್ವಾಸ್ಥ ಅಷ್ಟು ಕೆಟ್ಟದಾಗಿಲ್ಲ ಎಂಬುದಾಗಿದೆ. ಆದರೆ ಉತ್ತರ ಭಾರತದ ರಾಜ್ಯಗಳಲ್ಲಿ ಕ್ರಿಮಿನಲ್ ಪ್ರಕರಣಗಳು ಶೇ.70ರಷ್ಟಿದ್ದರೆ ಸಿವಿಲ್ ಪ್ರಕರಣಗಳು ಕೇವಲ ಶೇ.30ರಷ್ಟಿವೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅವರು ತಿಳಿಸಿದರು.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ನ್ಯಾ.ಅಶೋಕ್ ಜಿ.ನಿಜಗಣ್ಣವರ್ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಕ್ರಿಮಿನಲ್ ಪ್ರಕರಣಗಳು ಕಡಿಮೆಯಾಗಿದ್ದು, ದಾವೆಗಳು ಶೀಘ್ರವಾಗಿ ಇತ್ಯರ್ಥಗೊಳ್ಳುತ್ತಿವೆ. ಸಣ್ಣ ಸಣ್ಣ ವಿಚಾರ ಕ್ಕಾಗಿ ಮನಸ್ತಾಪ ಮಾಡಿ ಕೊಂಡು ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ನಾವೇ ನಮ್ಮ ಸಮಾಜದ ಹಾನಿಗೆ ಕಾರಣವಾಗುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ನ್ಯಾಯಮೂರ್ತಿ ಅಬ್ದುಲ್ ನಝೀರ್, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ(ಪೋಕ್ಸೋ ನ್ಯಾಯಾಲಯ) ಕಚೇರಿ ಮತ್ತು ಪೋಕ್ಸೋ ನ್ಯಾಯಾಲಯದ ಕಚೇರಿ, ಸಂತ್ರಸ್ತರ ವಿಶ್ರಾಂತಿ ಕೊಠಡಿಯನ್ನು ಉದ್ಘಾಟಿಸಿದರು.

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಎಂ.ಜೋಶಿ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ(ಪೋಕ್ಸೋ ನ್ಯಾಯಾಲಯ) ವನಮಾಲ ಆನಂದ ರಾವ್, ವಿಧಾನ ಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯ ಎಸ್.ಎಲ್.ಬೋಜೆಗೌಡ, ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಶೀಘ್ರವೇ ಕೌಟುಂಬಿಕ ನ್ಯಾಯಾಲಯ

ಉಡುಪಿ ವಕೀಲರ ಸಂಘದ ಬೇಡಿಕೆಯಂತೆ ಉಡುಪಿ ಜಿಲ್ಲೆಯಲ್ಲಿ ಶೀಘ್ರವೇ ಕೌಟುಂಬಿಕ ನ್ಯಾಯಾಲಯವನ್ನು ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಅದೇ ರೀತಿ ಉಡುಪಿ ನ್ಯಾಯಾಲಯದಲ್ಲಿ ಈಗಾಗಲೇ 2.80ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ನಡೆಸಲು ಎರಡು ಮೂರು ದಿನಗಳಲ್ಲಿ ಟೆಂಡರ್ ಅಂತಿಮಗೊಳಿಸಲಾಗುವುದು. ಅಲ್ಲದೆ ನಾಲ್ಕೂವರೆ ಕೋಟಿ ರೂ. ವೆಚ್ಚದ ಯೋಜನೆಯನ್ನು ಕೂಡ ಸಿದ್ಧಪಡಿಸಲಾ ಗಿದೆ. ಅದಕ್ಕೆ ಜನಪ್ರತಿನಿಧಿಗಳು ಸಹಕಾರ ನೀಡಬೇಕು ಎಂದು ನ್ಯಾ.ಅಶೋಕ್ ಜಿ.ನಿಜಗಣ್ಣವರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X