Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ಎಫೆಕ್ಟ್: 3 ದಿನಗಳ ರಂಗಭೂಮಿ...

ಕೊರೋನ ಎಫೆಕ್ಟ್: 3 ದಿನಗಳ ರಂಗಭೂಮಿ ನಾಟಕೋತ್ಸವ ರದ್ದು

ವಾರ್ತಾಭಾರತಿವಾರ್ತಾಭಾರತಿ14 March 2020 8:47 PM IST
share

ಉಡುಪಿ, ಮಾ.14: ರಂಗಭೂಮಿ ಉಡುಪಿ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಮಾ.17ರಿಂದ 19ರವರೆಗೆ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಿದ್ದ ಮೂರು ದಿನಗಳ ಮೈಸೂರು ರಂಗಾಯಣದ ಸಂಚಾರಿ ರಂಗ ಘಟಕದ ರಂಗ ಸಂಚಾರ -2019-20 ನಾಟಕೋತ್ಸವನ್ನು ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ರದ್ದುಪಡಿಸ ಲಾಗಿದೆ ಎಂದು ರಂಗಭೂಮಿಯ ಪ್ರಕಟಣೆ ತಿಳಿಸಿದೆ.

ಆದರೆ ಮಾ.27 ಮತ್ತು 28ರಂದು ‘ವಿಶ್ವ ರಂಗಭೂಮಿ ದಿನಾಚರಣೆ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಿಗದಿಪಡಿಸಿದಂತೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೊಗೇರ ಸಮ್ಮೇಳನ: ಉಡುಪಿ ಜಿಲ್ಲಾ ಮೊಗೇರ ಸಂಘದ ವತಿಯಿಂದ ಮಾ.15ರ ಬೆಳಗ್ಗೆ 10ರಿಂದ ಕಾರ್ಕಳ ಅತ್ತೂರಿನ ಚರ್ಚ್ ಹಾಲ್‌ನಲ್ಲಿ ನಡೆಯಬೇಕಿದ್ದ ಮೊಗೇರ ಸಮ್ಮೇಳನವನ್ನು ಮುಂದೂಡಿುವುದಾಗಿ ಸಂಘದ ಪ್ರಕಟಣೆ ತಿಳಿಸಿದೆ.

ರಕ್ತದಾನದ ಮೇಲೆ ಕೊರೋನ ವೈರಸ್ ಪ್ರಭಾವ

ಕೊರೋನ ವೈರಸ್‌ನ ಎಫೆಕ್ಟ್ ಇದೀಗ ರಕ್ತದಾನದ ಮೇಲೂ ನಕಾರಾತ್ಮಕ ಪರಿಣಾಮ ಬೀರಿದೆ. ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ಕ್ರಮವಾಗಿ ನಿಗದಿತ ರಕ್ತದಾನ ಶಿಬಿರಗಳನ್ನು ಇದೀಗ ರದ್ದು ಪಡಿಸಲಾಗಿದೆ.
ಇದರಿಂದ ರಕ್ತದಾನ ಮಾಡುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಆದರೂ ಆಸ್ಪತ್ರೆಗಳಲ್ಲಿ ರಕ್ತದ ಬೇಡಿಕೆ ಹೆಚ್ಚುತ್ತಿರುವುದನ್ನು ಗಮನಿಸಿ ಅಗತ್ಯವಿರುವವರಿಗೆ ಸಹಾಯ ಮಾಡಲು ಆರೋಗ್ಯವಂತ ಸಾರ್ವಜನಿಕರು ರಕ್ತದಾನ ಮಾಡಲು ಮುಂದಾಗುವಂತೆ ಮಣಿಪಾಲದ ಕೆಎಂಸಿ ಆಸ್ಪತ್ರೆಯ ರಕ್ತನಿಧಿ ಕೇಂದ್ರ ಮನವಿ ಮಾಡಿದೆ.

ರಕ್ತದಾನ ಸುರಕ್ಷಿತ ವಿಧಾನವಾಗಿದ್ದು, ರಕ್ತ ಮತ್ತು ರಕ್ತದ ಅಂಶಗಳು ಅಗತ್ಯವಿ ರುವ ರೋಗಿಗಳಿಗೆ ಸಹಾಯ ಮಾಡಲು ಜನರು ಮುಂದೆ ಬರುವಂತೆ ಅದು ತಿಳಿಸಿದೆ. ಕೆಎಂಸಿ ಆಸ್ಪತ್ರೆಯ ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗದ ನೆಲ ಮಹಡಿಯಲ್ಲಿರುವ ರಕ್ತನಿಧಿ ಕೇಂದ್ರದಲ್ಲಿ ಬೆಳಗ್ಗೆ 7:00ರಿಂದ ಸಂಜೆ 7:00 ರವರೆಗೆ ರಕ್ತದಾನ ಮಾಡುವ ಮೂಲಕ ರೋಗಿಗಳ ಜೀವ ಉಳಿಸಲು ಸಹಾಯ ಮಾಡುವಂತೆ ಅವರು ಮನವಿ ಮಾಡಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2922331ಕ್ಕೆ ಕರೆ ಮಾಡುವಂತೆ ಕೆಎಂಸಿಯ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪವರ್‌ಲಿಫ್ಟಿಂಗ್ ಸ್ಪರ್ಧೆ: ಉಡುಪಿಯಲ್ಲಿ ಮಾ.16ರಂದು ನಡೆಯಬೇಕಿದ್ದ, ಮಂಗಳೂರು ವಿವಿಯ ಅಂತರ ಕಾಲೇಜು ಪುರುಷರ ಪವರ್‌ಲಿಪ್ಟಿಂಗ್ ಸ್ಪರ್ಧೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್‌ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X