ಮಲಬಾರ್ ವಿಶ್ವರಂಗ ಪುರಸ್ಕಾರಕ್ಕಾಗಿ 5 ರಂಗಕರ್ಮಿಗಳ ಆಯ್ಕೆ

ಉಡುಪಿ, ಮಾ.14: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇವುಗಳ ವತಿಯಿಂದ ಈ ವರ್ಷದ ಮಲಬಾರ್ ವಿಶ್ವರಂಗ ಪುರಸ್ಕಾರಕ್ಕೆ ಜಿಲ್ಲೆಯ ಐವರು ಹಿರಿಯ ರಂಕರ್ಮಿಗಳನ್ನು ಆಯ್ಕೆ ಮಾಡಲಾಗಿದೆ.
ರಂಗಕರ್ಮಿಗಳಾದ ಶ್ರೀನಿವಾಸ್ ಶೆಟ್ಟಿಗಾರ್, ಡಾ.ಮಾಧವಿ ಭಂಡಾರಿ, ಜಯರಾಮ್ ನೀಲಾವರ್, ರಾಜಗೋಪಾಲ್ ಶೇಟ್, ಅಭಿಲಾಷಾ ಎಸ್. ಆಯ್ಕೆಯಾಗಿದ್ದು, ಮಾ.26ರಂದು ವಿಶ್ವ ರಂಗಭೂಮಿ ದಿನಾಚರಣೆಯ ಅಂಗ ವಾಗಿ ಮಲಬಾರ್ ಗೋಲ್ಡ್ ಉಡುಪಿ ಶಾಖೆಯಲ್ಲಿ ನಡೆಯಲಿರುವ ಕಾರ್ಯ ಕ್ರಮದಲ್ಲಿ ಇವರಿಗೆ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಸಂಚಾಲಕ ರವಿರಾಜ್ ಎಚ್.ಪಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





