ಗಾಂಜಾ ಮಾರಾಟ ಪ್ರಕರಣ: ಆರೋಪಿಗಳು ದೋಷಮುಕ್ತ
ಉಡುಪಿ, ಮಾ.14: ಗಾಂಜಾ ಮಾರಾಟ ಪ್ರಕರಣದ ಆರೋಪಿಗಳನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದೋಷಮುಕ್ತಗೊಳಿಸಿ ಆದೇಶ ನೀಡಿದೆ.
ಭಟ್ಕಳದ ಬೆಳ್ಳಾಲಕೊಂಡದ ನಿವಾಸಿ ನಫೀಸಾ ಯಾನೆ ಫರೀದಾ(45) ಹಾಗೂ ವಾಹನ ಚಾಲಕ ವಿನಾಯಕ ಭಂಡಾರಿ(45) ದೋಷಮುಕ್ತ ಗೊಂಡ ಆರೋಪಿಗಳು. ಮಣಿಪಾಲ ಪಾರಂಪಳ್ಳಿ ಚರ್ಚ್ ಎದುರಿನ ರಸ್ತೆಯಲ್ಲಿ ಓಮ್ನಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸಿ.ಎಂ.ಜೋಶಿ, ಕಾನೂನಿನ ಪಾಲನೆಯಲ್ಲಿ ಮತ್ತು ಸಾಕ್ಷದಲ್ಲಿ ದೋಷ ಕಂಡುಬಂದಿದೆ ಎಂದು ಹೇಳಿ ಆರೋಪಿಗಳನ್ನು ಬಿಡುಗಡೆಗೊಳಿಸಿ ಆದೇಶ ನೀಡಿದ್ದಾರೆ. ಆರೋಪಿಗಳ ಪರ ವಾಗಿ ಕುಂದಾಪುರದ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ವಾದಿಸಿದ್ದರು.
Next Story





