ಬಂಟ್ವಾಳ: ವಿದ್ಯಾರ್ಥಿನಿ ಆತ್ಮಹತ್ಯೆ
ಬಂಟ್ವಾಳ, ಮಾ.14: ತಾಲೂಕಿನ ಅಮ್ಟಾಡಿ ಗ್ರಾಮದ ಬೆದ್ರಗುಡ್ಡೆ ಎಂಬಲ್ಲಿನ ವಿದ್ಯಾರ್ಥಿನಿಯೊಬ್ಬಳು ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಬೆದ್ರಗುಡ್ಡೆ ಬಳಿಯ ಯಾದವ ಎಂಬವರ ಮಗಳು ರಕ್ಷಿತಾ(23) ಅಡ್ಯಾರ್ ಬಳಿಯ ಖಾಸಗಿ ಕಾಲೇಜಿನಲ್ಲಿ ಎಂ.ಬಿ.ಎ. ಪ್ರಥಮ ಸೆಮಿಸ್ಟರ್ ಕಲಿಯುತ್ತಿದ್ದರು. ಶನಿವಾರ ಬೆಳಗ್ಗೆ ಅಡುಗೆ ಕೋಣೆಯಲ್ಲಿ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪೋಷಕರ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story





