Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಮ್ಮ ಆದೇಶವನ್ನೇ ಉಲ್ಲಂಘಿಸಿದ...

ತಮ್ಮ ಆದೇಶವನ್ನೇ ಉಲ್ಲಂಘಿಸಿದ ಮದುವೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ

ಸರಕಾರದ ಆದೇಶ ಉಲ್ಲಂಘಿಸಿ ಅದ್ಧೂರಿ ಮದುವೆ

ವಾರ್ತಾಭಾರತಿವಾರ್ತಾಭಾರತಿ15 March 2020 5:04 PM IST
share
ತಮ್ಮ ಆದೇಶವನ್ನೇ ಉಲ್ಲಂಘಿಸಿದ ಮದುವೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ

ಬೆಳಗಾವಿ, ಮಾ.15: ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಒಂದು ವಾರಗಳ ಕಾಲ ಅದ್ಧೂರಿ ಸಂಭ್ರಮಾಚರಣೆ, ಸಮಾರಂಭಗಳಿಗೆ ಕಡಿವಾಣ ಹಾಕಿ ಆದೇಶ ಹೊರಡಿಸಿದೆ. ಆದರೂ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರ ಪುತ್ರಿಯ ವಿವಾಹ ಸರಕಾರದ ಆದೇಶ ಉಲ್ಲಂಘಿಸಿ ನೆರವೇರಿದ್ದು, ಸ್ವತಃ ಸಿಎಂ ಇದಕ್ಕೆ ಸಾಕ್ಷಿಯಾಗಿದ್ದರು.

ಸಭೆ, ಸಮಾರಂಭಗಳನ್ನು ನಿಷೇಧಿಸಿದ ಕುರಿತು ಘೋಷಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಈ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಆದೇಶವನ್ನು ತಾವೇ ಉಲ್ಲಂಘಿಸಿದ್ದಾರೆ. ಅಲ್ಲದೆ, ಕೇಂದ್ರ ಸಚಿವ ಸುರೇಶ್ ಅಂಗಡಿ, ಸಚಿವರಾದ ಬಸವರಾಜ ಬೊಮ್ಮಾಯಿ, ಶ್ರೀಮಂತ ಪಾಟೀಲ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಶಾಸಕರು ಪಾಲ್ಗೊಂಡಿದ್ದಾರೆ.

ಹೆಚ್ಚಿನ ಜನಸಂದಣಿಯ ಕಾರ್ಯಕ್ರಮಗಳನ್ನು ನಿಯಂತ್ರಿಸಬೇಕು. ಯಾರಿಗೂ ಸಭೆ, ಸಮಾರಂಭಗಳಿಗೆ ಅವಕಾಶ ನೀಡಬಾರದು ಎಂದು ಸರಕಾರದ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಆದರೂ, ಮುಂಜಾನೆಯಿಂದ ಸಾವಿರಾರು ಸಂಖ್ಯೆಯಲ್ಲಿ ವಿವಿಧ ಕಡೆಗಳಿಂದ ಜನರು ಆಗಮಿಸುತ್ತಿದ್ದಾರೆ. ಅಲ್ಲದೆ, ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದರೆ, ಇಂತಹ ಸಭೆ, ಸಮಾರಂಭಗಳನ್ನು ಕಡಿಮೆ ಜನರಿಗೆ ಸೀಮಿತಗೊಳಿಸುವಂತೆ ಮನವೊಲಿಸಬೇಕಾದ ಅಧಿಕಾರಿಗಳು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದು ಸರಕಾರದ ಆದೇಶ ಉಲ್ಲಂಘಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ತಿಳಿಸುವ ಬ್ಯಾನರ್‌ಗಳನ್ನು ಸಮಾರಂಭ ನಡೆಯುವ ಎರಡು ಕಡೆಗಳಲ್ಲಿ ಹಾಕಲಾಗಿತ್ತು. ಬಂದವರೆಲ್ಲರೂ ಕೈಗೆ ಸ್ಯಾನಿಟೈಸರ್ ಹಾಕಿಕೊಂಡು ಹೋಗುವಂತಹ ವ್ಯವಸ್ಥೆ ಮಾಡಲಾಗಿತ್ತು. ಕಡಿಮೆ ಪ್ರಮಾಣದ ಮಾಸ್ಕ್‌ಗಳನ್ನು ತಂದಿದ್ದರಿಂದ, ಕೆಲವರಷ್ಟೇ ಅವುಗಳನ್ನು ಬಳಸುತ್ತಿದ್ದರು.

ತಪಾಸಣೆಗೆ ಒಳಗಾಗದ ಸಿಎಂ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ, ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ಕೊರೋನಾ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗಿತ್ತಾದರೂ, ಸಿಎಂ ಯಾವುದೇ ತಪಾಸಣೆಗೆ ಒಳಗಾಗಲಿಲ್ಲ. ಅನಂತರ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಹಾಗೂ ಸಚಿವ ಸಿ.ಟಿ. ರವಿಗೆ ತಪಾಸಣೆ ಮಾಡಲಾಯಿತು.

'ಕರೆದುಕೊಂಡು ಬಂದು, ಬಿಟ್ಟೋಗುತ್ತೀರಾ'
‘ನೀವು ನನ್ನನ್ನು ಜತೆಯಲ್ಲಿ ಕರೆದುಕೊಂಡು ಬಂದು, ಈಗ ಇಲ್ಲಿಯೇ ಬಿಟ್ಟು ಹೋಗುತ್ತೀರಾ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಸಿಎಂ ಯಡಿಯೂರಪ್ಪರನ್ನು ಪ್ರಶ್ನಿಸಿದ ಪ್ರಸಂಗ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆಯಿತು. ಮಹಾಂತೇಶ ಕವಟಗಿಮಠ ಪುತ್ರಿ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಹುಬ್ಬಳ್ಳಿಗೂ ಅವರೊಂದಿಗೆ ವಿಶೇಷ ವಿಮಾನದಲ್ಲಿ ತೆರಳಲು ಅವಕಾಶ ಸಿಗದಿದ್ದಕ್ಕೆ ಶೋಭಾ ಸಿಟ್ಟು ಮಾಡಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X