Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿಎಎ-ಎನ್‌ಪಿಆರ್-ಎನ್‌ಆರ್‌ಸಿ...

ಸಿಎಎ-ಎನ್‌ಪಿಆರ್-ಎನ್‌ಆರ್‌ಸಿ ಬಹಿಷ್ಕಾರಕ್ಕೆ ಎಸ್‌ಡಿಪಿಐ ಕರೆ

ವಾರ್ತಾಭಾರತಿವಾರ್ತಾಭಾರತಿ15 March 2020 7:05 PM IST
share

ಬೆಂಗಳೂರು, ಮಾ.15: ರಾಜ್ಯ ಸರಕಾರ ಕರ್ನಾಟಕದಲ್ಲಿ ಯಾವುದೆ ಕಾರಣಕ್ಕೂ ಸಿಎಎ, ಎನ್‌ಪಿಆರ್, ಎನ್‌ಆರ್‌ಸಿ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ರಾಜ್ಯಾದ್ಯಂತ ಈಗಾಗಲೆ ಹೋರಾಟಗಳು ನಿರಂತರವಾಗಿ ನಡೆಯುತ್ತಿದೆ. ಹೀಗಿದ್ದರೂ ಮುಂಬರುವ ಎಪ್ರಿಲ್ 15ರಿಂದ ರಾಜ್ಯಾದ್ಯಂತ ಎನ್‌ಪಿಆರ್ ಸರ್ವೆ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮುಹಮ್ಮದ್ ಇಲ್ಯಾಸ್ ತುಂಬೆ ತಿಳಿಸಿದ್ದಾರೆ.

ರವಿವಾರ ನಗರದ ಕಬ್ಬನ್‌ಪೇಟೆ ಮುಖ್ಯರಸ್ತೆಯಲ್ಲಿರುವ ಹಮೀದ್ ಷಾ ಕಾಂಪ್ಲೆಕ್ಸ್‌ನಲ್ಲಿರುವ ಎಸ್‌ಡಿಪಿಐ ಕಚೇರಿಯಲ್ಲಿ ಆಯೋಜಿಸಲಾಗಿದ್ದ ‘ಸಂವಿಧಾನ ಸಂರಕ್ಷಣಾ ಆಂದೋಲನ’ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಎನ್‌ಪಿಆರ್ ಎಂಬುವುದು ಎನ್‌ಆರ್‌ಸಿಯ ಹಿಂಬಾಗಿಲು ಎಂಬುವುದು ಕಹಿ ಸತ್ಯ. ಒಟ್ಟಾರೆ ಪೌರತ್ವ ತಿದ್ದುಪಡಿ ಕಾಯಿದೆ ಸಂವಿಧಾನ ವಿರೋಧಿಯಾಗಿದೆ. ಇದನ್ನು ಜಾತ್ಯತೀತ ರಾಷ್ಟ್ರವಾದ ನಮ್ಮ ಭಾರತ ಒಪ್ಪಲು ಸಾಧ್ಯವಿಲ್ಲ. ಆದುದರಿಂದ ನಾವೆಲ್ಲರೂ ಒಗ್ಗೂಡಿ ಈ ಸಿಎಎ, ಎನ್‌ಪಿಆರ್, ಎನ್‌ಆರ್‌ಸಿಯನ್ನು ಬಹಿಷ್ಕಾರ ಮಾಡಬೇಕಿದೆ ಎಂದು ಅವರು ಕರೆ ನೀಡಿದರು.

ಸಂವಿಧಾನ ಸಂರಕ್ಷಣಾ ಆಂದೋಲನದ ಹೆಸರಿನಡಿಯಲ್ಲಿ ರಾಜ್ಯಾದ್ಯಂತ ಮನೆ-ಮನೆಗೆ ಹೋಗಿ ಎನ್‌ಪಿಆರ್ ಹೇಗೆ ಜನ ವಿರೋಧಿಯಾಗಿದೆ ಎಂಬುದರ ಕುರಿತು ಜಾಗೃತಿ ಮೂಡಿಸಲಾಗುವುದು. ಮೊಹಲ್ಲಾ ಸಭೆಗಳು ಮಾಡಲಾಗುವುದು. ಅಗತ್ಯಕ್ಕೆ ಅನುಸಾರವಾಗಿ ಹೋರಾಟಗಳನ್ನು ರೂಪಿಸಲಾಗುವುದು. ಈ ಜನಪರ ಆಂದೋಲನವನ್ನು ಪಕ್ಷಾತೀತವಾಗಿ ಮಾಡಬೇಕು ಎಂದು ಇಲ್ಯಾಸ್ ತುಂಬೆ ತಿಳಿಸಿದರು.

ಎಸ್‌ಡಿಪಿಐ ರಾಷ್ಟ್ರೀಯ ಮುಖಂಡ ಡಾ.ಅವಾದ್ ಶರೀಫ್ ಮಾತನಾಡಿ, ಈಗಾಗಲೆ ರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರಮಟ್ಟದ ಹಲವಾರು ಪ್ರಗತಿಪರ ಸಂಘಟನೆಗಳ ಪಧಾದಿಕಾರಿಗಳ ಸಹಯೋಗದಲ್ಲಿ ‘ಸಂವಿಧಾನ ಸಂರಕ್ಷಣಾ ಆಂದೋಲನ’ ಎಂಬ ವೇದಿಕೆ ಮಾಡಲಾಗಿದ್ದು, ಇದರಡಿಯಲ್ಲಿ ಅನೇಕ ಕಾರ್ಯಾಗಾರಗಳನ್ನು ಮಾಡಲಾಗಿದೆ ಎಂದರು.

ಇದರ ಪರಿಣಾಮವಾಗಿ ಜನಸಾಮಾನ್ಯರು ದೇಶದ್ಯಾಂತ ಸಿಎಎ, ಎನ್‌ಪಿಆರ್ ಹಾಗೂ ಎನ್‌ಆರ್‌ಸಿ ಬಹಿಷ್ಕರಿಸಲು ಮಾನಸಿಕವಾಗಿ ಸಿದ್ಧವಾಗಿದ್ದಾರೆ. ಇಷ್ಟಿದರೂ ನಮ್ಮ ಹೋರಾಟ ಮುಂದುವರಿಸಬೇಕಾಗಿದೆ. ಎಲ್ಲಿಯವರೆಗೆ ಅಂದರೆ ಸರಕಾರ ಅಧಿಕೃತವಾಗಿ ಸಿಎಎ, ಎನ್‌ಪಿಆರ್ ಹಾಗೂ ಎನ್‌ಆರ್‌ಸಿಯನ್ನು ಹಿಂಪಡೆಯುವವರೆಗೂ ನಾವು ಪಕ್ಷಾತೀತವಾಗಿ ಹೋರಾಟವನ್ನು ಮಾಡಬೇಕು ಎಂದು ಒತ್ತಿ ಹೇಳಿದರು.

ಕಾರ್ಯಗಾರದಲ್ಲಿ ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹನ್ನಾನ್, ರಾಜ್ಯ ನಾಯಕರು, ಪಕ್ಷದ ಜಿಲ್ಲಾ ಅಧ್ಯಕ್ಷರು, ಕಾರ್ಯದರ್ಶಿಗಳು, ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X