ಹಿರಿಯ ಸಾಹಿತಿ ಡಾ.ಪಾಟೀಲ ಪುಟ್ಟಪ್ಪ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ

ಹುಬ್ಬಳ್ಳಿ, ಮಾ.15: ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್)ಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಸಾಹಿತಿ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯವನ್ನು ವಿಚಾರಿಸಿದರು.
ಆಸ್ಪತ್ರೆಯ ತಜ್ಞ ವೈದ್ಯ ಪ್ರೊ.ಡಿ.ಎಂ.ಕಬಾಡಿ ಅವರಿಗೆ ಸೂಕ್ತ, ಗುಣಮಟ್ಟ ಚಿಕಿತ್ಸೆ ನೀಡುವಂತೆ ಸಿಎಂ ತಿಳಿಸಿದರು. ಇದೇ ವೇಳೆ ಶೀಘ್ರವಾಗಿ ಗುಣಮುಖರಾಗುವಂತೆ ಆರೈಸಿದರು. ಮುಖ್ಯಮಂತ್ರಿಯ ಜತೆಗೆ ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಉಪಸ್ಥಿತರಿದ್ದರು.
Next Story





