1 ಕೋಟಿ ರೂ.ಗಳಿಗೆ ಹೆಚ್ಚಳ ಮಾಡದಿದ್ದೆರೆ ಹೋರಾಟದ ಎಚ್ಚರಿಕೆ
ಕಾಮಗಾರಿಗಳಲ್ಲಿ ಪರಿಶಿಷ್ಟರಿಗೆ ಮೀಸಲಾತಿ
ಬೆಂಗಳೂರು, ಮಾ. 15: ಸರಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಕಾಮಗಾರಿ ಮೊತ್ತವನ್ನು 1ಕೋಟಿ ರೂ.ಗೆ ಹೆಚ್ಚಳ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ವಾಪಸ್ ಕಳುಹಿಸಿದ್ದು, ಇದರ ವಿರುದ್ಧ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಸ್ಸಿ-ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎನ್.ಮಹದೇವಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಮೂರು ದಿನಗಳಲ್ಲಿ ರಾಜ್ಯ ಸರಕಾರ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಸ್ಪಷ್ಟ ನಿರ್ಧಾರ ಪ್ರಕಟಿಸದಿದ್ದರೆ ಗುತ್ತಿಗೆದಾರರ ಸಂಘ ಮತ್ತು ದಲಿತ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಸಿಎಂ ನಿವಾಸಕ್ಕೆ ಚಲೋ ಹಮ್ಮಿಕೊಳ್ಳಲಾಗುವುದು ಎಂದು ಮಹದೇವಸ್ವಾಮಿ ತಿಳಿಸಿದ್ದಾರೆ.
ಸಭೆ-ಸಮಾರಂಭಗಳಲ್ಲಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಭರವಸೆ ನೀಡುವ ಮುಖ್ಯಮಂತ್ರಿ ಯಡಿಯೂರಪ್ಪ, ಪರಿಶಿಷ್ಟರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕಲ್ಪಿಸುವ ಮತ್ತು ಆರ್ಥಿಕ ಸ್ವಾವಲಂಬಿ ಬಕುದು ಕಟ್ಟಿಕೊಳ್ಳುವ ಯೋಜನೆಗೆ ಅನುಮೋದನೆ ನೀಡದೆ ವಾಪಸ್ ಕಳುಹಿಸಿರುವುದು ಸಮುದಾಯಕ್ಕೆ ಮಾಡಿದ ವಂಚನೆ ಎಂದು ಮಹದೇವಸ್ವಾಮಿ ಪ್ರಕಟಣೆಯಲ್ಲಿ ಆಕ್ಷೇಪಿಸಿದ್ದಾರೆ.





