ಕೊರೋನ ವೈರಸ್: ಹೆಚ್ಚಿನ ತಪಾಸಣಾ ಕೇಂದ್ರ ತೆರೆಯಲು ಡಿಸಿಎಂ ಸವದಿ ಸೂಚನೆ
ಬಳ್ಳಾರಿ, ಮಾ.15: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನ ವೈರಸ್ ಪಿಡುಗನ್ನು ತಡೆಯಲು ತುರ್ತಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಮತ್ತು ವೈದ್ಯಾಧಿಕಾರಿಗಳ ಸಹಕಾರ ಪಡೆದು ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಹೆಚ್ಚಿನ ತಪಾಸಣಾ ಕೇಂದ್ರಗಳನ್ನು ತೆರೆಯಬೇಕು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೂಚನೆ ನೀಡಿದ್ದಾರೆ.
ಈ ಕುರಿತು ಬಳ್ಳಾರಿ ಜಿಲ್ಲಾಧಿಕಾರಿಗೆ ಪತ್ರ ಬರೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿರುವ ಲಕ್ಷ್ಮಣ ಸವದಿ, ಮುಂಜಾಗೃತ ಕ್ರಮವಾಗಿ ಪ್ರತ್ಯೇಕ ಐಸೋಲೇಟೆಡ್ ವಾರ್ಡುಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.
ಯಾವುದೇ ಸಂಶಯಾಸ್ಪದ ಕೊರೋನ ಪ್ರಕರಣಗಳು ಕಂಡು ಬಂದಲ್ಲಿ ಕೂಡಲೆ ಸರಕಾರದ ಗಮನಕ್ಕೆ ತಂದು ಸೂಕ್ತ ಚಿಕಿತ್ಸೆ ಮತ್ತು ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
Next Story





