ಚಿಕ್ಕಮಗಳೂರು: ನಗರದ ರಸ್ತೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ 11 ಕೋ. ರೂ. ಬಿಡುಗಡೆ; ಸಚಿವ ಸಿ.ಟಿ.ರವಿ
ಚಿಕ್ಕಮಗಳೂರು, ಮಾ.15: ನಗರದ ರಸ್ತೆಗಳ ಅಭಿವೃದ್ದಿಗೆ ರಾಜ್ಯ ಸರಕಾರ 11 ಕೋಟಿ ರೂ. ವಿಶೇಷ ಅನುದಾನ ಮಂಜೂರು ಮಾಡಿದೆ ಎಂದು ಸಚಿವ ಸಿ.ಟಿ ರವಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಮುಖ್ಯಮಂತ್ರಿಗಳು 6 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಿದ್ದರು. ನಂತರ ಮುಖ್ಯಮಂತ್ರಿ ಬಳಿ ಇನ್ನಷ್ಟು ಅನುದಾನಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಮತ್ತೆ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಅವರು ತಿಳಿಸಿದ್ದು, ಈ ಅನುದಾನದಲ್ಲಿ ನಗರದಲ್ಲಿ ಅತಿ ತುರ್ತಾಗಿ ಅಭಿವೃದ್ಧಿಪಡಿಸಬೇಕಾಗಿರುವ ರಸ್ತೆಗಳನ್ನು ಪ್ರಥಮ ಆದ್ಯತೆಯಲ್ಲಿ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ನಗರದಲ್ಲಿ ಅಮೃತ್ ಯೋಜನೆ ಕಾಮಗಾರಿ ಚಾಲನೆಯಲ್ಲಿರುವುದರಿಂದ ಕೆಲವೊಂದು ರಸ್ತೆಗಳು ಹಾಳಾಗಿವೆ. ಈ ರಸ್ತೆಗಳನ್ನು ಅಭಿವೃದ್ಧಿಪಡಿಸಲು ತಕ್ಷಣ ಕ್ರಿಯಾಯೋಜನೆ ತಯಾರಿಸಿ ಕಾಮಗಾರಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story





