ಕೊರೋನ: ಸೋಂಕಿತರ ಸಂಖ್ಯೆ 110ಕ್ಕೆ ಏರಿಕೆ

ಹೊಸದಿಲ್ಲಿ, ಮಾ. 16: ಭಾರತದಾದ್ಯಂತ 17 ವಿದೇಶಿಯರು ಸೇರಿದಂತೆ ಒಟ್ಟು 110 ಕೊರೋನ ವೈರಸ್ ಸೋಂಕು ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ರವಿವಾರ ತಿಳಿಸಿದೆ.
ಕೊರೋನ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿ ಮಹಾರಾಷ್ಟ್ರ (32) ಇದ್ದರೆ, ಅನಂತರ ಸ್ಥಾನದಲ್ಲಿ ಕೇರಳ (22) ಇದೆ. ವಿಮಾನ ನಿಲ್ದಾಣಗಳಲ್ಲಿ ಒಟ್ಟು 12,76, 046 ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
Next Story





