Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರೋಗ್ಯವಂತರು ಮಾಸ್ಕ್ ಧರಿಸುವುದು ಬೇಡ :...

ಆರೋಗ್ಯವಂತರು ಮಾಸ್ಕ್ ಧರಿಸುವುದು ಬೇಡ : : ಜಿಲ್ಲಾಧಿಕಾರಿ ಸಿಂಧೂ ಸ್ಪಷ್ಟನೆ

ಕೊರೋನ ಭೀತಿ

ವಾರ್ತಾಭಾರತಿವಾರ್ತಾಭಾರತಿ16 March 2020 10:23 PM IST
share
ಆರೋಗ್ಯವಂತರು ಮಾಸ್ಕ್ ಧರಿಸುವುದು ಬೇಡ : : ಜಿಲ್ಲಾಧಿಕಾರಿ ಸಿಂಧೂ ಸ್ಪಷ್ಟನೆ

ಮಂಗಳೂರು, ಮಾ.16: ವಿಶ್ವವನ್ನೇ ಸಂಕಷ್ಟಕ್ಕೆ ಈಡು ಮಾಡಿದ ಕೊರೋನವೈರಸ್ ಭೀತಿಯ ಹಿನ್ನಲೆಯಲ್ಲಿ ಸಾರ್ವಜನಿಕರು ಮಾಸ್ಕ್‌ಗಳನ್ನು ಧರಿಸುತ್ತಿರುವುದು ಹೆಚ್ಚಾಗಿ ಕಂಡು ಬರುತ್ತಿದೆ. ಆದರೆ ಆರೋಗ್ಯವಂತ ವ್ಯಕ್ತಿಗಳು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ಪಷ್ಟಪಡಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ‘ಕೊರೋನ ಸೋಂಕು ಹಿನ್ನೆಲೆ ಜಿಲ್ಲೆಯ ಕೈಗಾರಿಕೋದ್ಯಮಿಗಳ, ಉದ್ಯಮ ಸಂಸ್ಥೆಗಳ ಸಭೆಯಲ್ಲಿ ಅವರು ಮಾತನಾಡಿದರು.

ಮಾಸ್ಕ್ ಧರಿಸುವುದು ಎಲ್ಲರಿಗೂ ಕಡ್ಡಾಯವಲ್ಲ. ಅನಾರೋಗ್ಯ ಪೀಡಿತರು, ರೋಗ ಲಕ್ಷಣ ಇರುವವರು ಮಾಸ್ಕ್ ಧರಿಸಬೇಕು. ಆದಾಗ್ಯೂ, ಜಿಲ್ಲೆಯಲ್ಲಿ ಮಾಸ್ಕ್ ಸಂಗ್ರಹ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಔಷಧಿ ನಿಯಂತ್ರಣ ಇಲಾಖೆಯು ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಲಿದೆ. ಮಾಸ್ಕ್ ದರದ ಮೇಲೆ ನಿಗಾ ಇಡಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯ ಎಲ್ಲ ಕೈಗಾರಿಕಾ ಘಟಕಗಳು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಕಾಯಿಲೆ ಸಾಂಕ್ರಾಮಿಕವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಇತ್ತೀಚಿನ ದಿನಗಳಲ್ಲಿ ದೇಶ ವಿದೇಶಗಳಲ್ಲಿ ಪ್ರವಾಸ ಕೈಗೊಂಡಿರುವವರ ಮೇಲೆ ವೈದ್ಯಕೀಯ ನಿಗಾ ಇಟ್ಟು ಅವರನ್ನು 28 ದಿನಗಳ ನಿಗಾ ಅವಧಿಯಲ್ಲಿ ಇಡಬೇಕು. ಅಲ್ಲದೇ ಅವರ ಕುಟುಂಬ ಸದಸ್ಯರು, ಅದರಲ್ಲೂ 60 ವರ್ಷ ಮೇಲ್ಪಟ್ಟವರ ಆರೋಗ್ಯದ ಮೇಲೆ ನಿಗಾ ವಹಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಕೊರೋನ ವ್ಯಾಪಿಸದಂತೆ ಎಲ್ಲ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣ ಹಾಗೂ ನವ ಮಂಗಳೂರು ಬಂದರಿಗೆ ಆಗಮಿಸುವ ವಿದೇಶಿ ಯಾತ್ರಿಕರ ಮೇಲೆ ವೈದ್ಯಕೀಯ ನಿಗಾ ಇರಿಸಲಾಗಿದೆ. ಜಿಲ್ಲೆಯ ಬಹುತೇಕ ಆಸ್ಪತ್ರೆಗಳಲ್ಲಿ ಪ್ರತ್ಯೇಕ ‘ಐಸೊಲೇಷನ್ ವಾರ್ಡ್’ ಸಿದ್ಧಪಡಿಸಲಾಗಿದೆ. ಮಂಗಳೂರಿನ ಇಎಸ್‌ಐ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೋನ ನಿಯಂತ್ರಣಕ್ಕೆ ಬಳಸಿಕೊಳ್ಳಲಾಗುವುದು. ಇದೇ ರೀತಿ ಎನ್‌ಎಂಪಿಟಿ ಆಸ್ಪತ್ರೆಯಲ್ಲೂ ಅಗತ್ಯ ಸಿದ್ಧತೆ ಮಾಡಿ ಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಎಲ್ಲ ಕೈಗಾರಿಕಾ ಘಟಕಗಳು ತಮ್ಮ ಉದ್ಯೋಗಿಗಳ ಆರೋಗ್ಯದ ಮೇಲೆ ಗಮನ ಹರಿಸಬೇಕು. ಅನಾರೋಗ್ಯ ಪೀಡಿತರಿಗೆ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕಾಗಿ ಅವರಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲದಾಸ್ ನಾಯಕ್, ವಿವಿಧ ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.

ಕೈಗಾರಿಕೋದ್ಯಮಿಗಳು ದೇಶ ವಿದೇಶಗಳಿಗೆ ತಮ್ಮ ಪ್ರವಾಸವನ್ನು ಆದಷ್ಟು ನಿಯಂತ್ರಿಸಬೇಕು. ಅದೇ ರೀತಿ ವಿದೇಶಿ ವ್ಯಾವಹಾರಿಕ ಸಭೆಗಳನ್ನು ಮುಂದೂಡಬೇಕು.

- ಸಿಂಧೂ ಬಿ. ರೂಪೇಶ್, ದ.ಕ. ಜಿಲ್ಲಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X