Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿರಿಯ ಸಾಹಿತಿ, ನಾಡೋಜ ಪಾಟೀಲ ಪುಟ್ಟಪ್ಪ...

ಹಿರಿಯ ಸಾಹಿತಿ, ನಾಡೋಜ ಪಾಟೀಲ ಪುಟ್ಟಪ್ಪ ನಿಧನ

ವಾರ್ತಾಭಾರತಿವಾರ್ತಾಭಾರತಿ16 March 2020 10:32 PM IST
share
ಹಿರಿಯ ಸಾಹಿತಿ, ನಾಡೋಜ ಪಾಟೀಲ ಪುಟ್ಟಪ್ಪ ನಿಧನ

ಬೆಂಗಳೂರು, ಮಾ.17: ಹಿರಿಯ ಸಾಹಿತಿ, ಹೋರಾಟಗಾರ, ಪತ್ರಕರ್ತ ಡಾ.ಪಾಟೀಲ ಪುಟ್ಟಪ್ಪ ಇಂದು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಕಿಮ್ಸ್‌ಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದು, ಅವರಿಗೆ 101 ವರ್ಷ ವಯಸ್ಸಾಗಿತ್ತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 

ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಪುಟ್ಟಪ್ಪನವರನ್ನು ಪರೀಕ್ಷಿಸಿದ ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ, ಕಿಡ್ನಿ ಸೋಂಕಿಗೆ ಒಳಗಾಗಿದೆ, ರಕ್ತದ ಕೊರತೆ ಇದೆ, ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದ್ದರು. ಪುಟ್ಟಪ್ಪನವರು ಆಸ್ಪತ್ರೆಗೆ ದಾಖಲಾದ ವಿಷಯ ತಿಳಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇತ್ತೀಚಿಗಷ್ಟೇ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

ಕನ್ನಡ ನಾಡಿನ ಸಾಕ್ಷಿಪ್ರಜ್ಞೆಯಾಗಿ, ಸಂಸ್ಕೃತಿ ರಕ್ಷಕರಾಗಿ, ’ಪ್ರಪಂಚ’ ಪತ್ರಿಕೆಯ ಸ್ಥಾಪಕ ಸಂಪಾದಕರಾದ ನಾಡೋಜ ಪಾಟೀಲ ಪುಟ್ಟಪ್ಪ ಜನಿಸಿದ್ದು 1919 ಜನವರಿ 14ರಂದು, ಹಾವೇರಿ ತಾಲೂಕಿನ ಕುರುಬಗೊಂಡದಲ್ಲಿ. ಕುರುಬಗೊಂಡ, ಬ್ಯಾಡಗಿ, ಹಾವೇರಿ, ಧಾರವಾಡದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಪುಟ್ಟಪ್ಪನವರು, ಕರ್ನಾಟಕ ಕಾಲೇಜಿನಲ್ಲಿ ಪದವಿ, ಬೆಳಗಾವಿಯಲ್ಲಿ ಕಾನೂನು ಅಧ್ಯಯನ ಮಾಡಿ ಮುಂಬಯಿ ಮತ್ತು ಹುಬ್ಬಳ್ಳಿಯಲ್ಲಿ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕೆಲಸ ನಿರ್ವಹಿಸಿದ್ದರು. 1945ರಲ್ಲಿ ವಕೀಲಿ ವೃತ್ತಿಗಾಗಿ ಮುಂಬಯಿಗೆ ತೆರಳಿದ್ದ ಪುಟ್ಟಪ್ಪನವರು, 1949ರಲ್ಲಿ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಅಮೆರಿಕೆಯಿಂದ ಮರಳಿದ ನಂತರ ನವಯುಗ ಮಾಸಪತ್ರಿಕೆಯ ಸಂಪಾದಕರಾಗಿ, 1954ರಲ್ಲಿ ಪ್ರಪಂಚ ಪತ್ರಿಕೆಯನ್ನು ಆರಂಭಿಸಿದ್ದರು. 1962ರಿಂದ 1974ರವರೆಗೆ ಎರಡು ಅವಧಿಗೆ ರಾಜ್ಯಸಭಾ ಸದಸ್ಯರಾಗಿದ್ದ ಶ್ರೀಯುತರು, 1942ರ ಆಗಸ್ಟ್ 9ರಂದು ಕಾಲೇಜಿನ ಬ್ರಿಟಿಷ್ ಅಧ್ಯಾಪಕರಿಗೆ ಬಲವಂತವಾಗಿ ಗಾಂಧಿ ಟೋಪಿ ಹಾಕಿ ಸುದ್ದಿ ಆಗಿದ್ದರು. ಡಾ. ಪಾಟೀಲ ಪುಟ್ಟಪ್ಪನವರು ಅಪ್ರತಿಮ ಹೋರಾಟಗಾರರು, ನಿರ್ಭೀತ ಪತ್ರಕರ್ತರು ಹಾಗೂ ಸೃಜನಶೀಲ ಸಾಹಿತಿಯಾಗಿದ್ದರು. ನಮ್ಮ ದೇಶ ನಮ್ಮ ಜನ, ನನ್ನದು ಈ ಕನ್ನಡ ನಾಡು, ಕರ್ನಾಟಕದ ಕಥೆ, ಪಾಪು ಪ್ರಪಂಚ, ಶಿಲಾಬಾಲಿಕೆ ನುಡಿದಳು, ಗವಾಕ್ಷ ತೆರೆಯಿತು, ಸಾವಿನ ಮೇಜವಾನಿಗಳಂತಹ ಅಪೂರ್ವ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಕೊಡುಗೆಯಾಗಿ ನೀಡಿದ್ದರು.

ಪ್ರಪಂಚದಷ್ಟೆ ಓದುಗರ ಜ್ಞಾನವೂ ವಿಸ್ತಾರವಾಗಬೇಕೆಂಬ ಹಂಬಲದಿಂದ ತಮ್ಮ ಸಂಪಾದಕತ್ವದಲ್ಲಿ ಪ್ರಪಂಚ ವಾರಪತ್ರಿಕೆಯನ್ನು ನಡೆಸಿದವರು. ಕರ್ನಾಟಕ ಏಕೀಕರಣಕ್ಕಾಗಿ ಅವರು ನಡೆಸಿದ ಹೋರಾಟ ಅನನ್ಯವಾದುದು. ವರ್ತಮಾನದ ಎಲ್ಲ ವಿಚಾರಗಳ ಬಗ್ಗೆ ನಾಡಿನ ವಿವಿಧ ಪತ್ರಿಕೆಗಳಲ್ಲಿನ ಅವರ ಅಂಕಣ ಬರಹಗಳು ಓದುಗರಿಗೆ ಮನ ಗೆದ್ದಿದ್ದವು. ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಪುಟ್ಟಪ್ಪನವರು ನಾಡಿನಾದ್ಯಂತ ಕೈಗೊಂಡ ಕನ್ನಡ ಭಾಷಾ ಜಾಗೃತಿ ಅಭಿಯಾನ ಹಾಗೂ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಸದೃಢವಾಗಿ ಬೆಳೆಸುವಲ್ಲಿ ಪುಟ್ಟಪ್ಪನವರ ಪಾತ್ರ ಶ್ಲಾಘನೀಯ. ಬೆಳಗಾವಿಯಲ್ಲಿ 2003ರಲ್ಲಿ ಜರುಗಿದ 70ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಅವರಿಗೆ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸರಕಾರದ ಟಿಎಸ್‌ಆರ್ ಪತ್ರಿಕಾ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಿಲಿಟ್ ಪದವಿ. ಹಂಪಿ ವಿಶ್ವವಿದ್ಯಾಲಯದ ನಾಡೋಜ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ನೃಪತುಂಗ ಸಾಹಿತ್ಯ ಪ್ರಶಸ್ತಿಗಳು ಸಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X